ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಘನ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದ.ಕ ಜಿಲ್ಲಾ ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ, ಪದಾಧಿಕಾರಿಗಳು ಮತ್ತುವೇದಿಕೆಯ ನಿವೃತ್ತ ಸರಕಾರಿ ನೌಕರರು ಅವರಿಗೆ ಶುಭ ಹಾರೈಸುವ ಜತೆಗೆ ತಮ್ಮ ವೇದಿಕೆಯ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನ್ಯಾಯ ದೊರಕಿಸಿಕೊಡುವಂತೆ ಮನವಿಯನ್ನು ಸಲ್ಲಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…