
sARPANGALA
ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಅನುಕ್ರಮವಾಗಿ ಅರ್ಥಧಾರಿ, ಹವ್ಯಾಸಿ ವೇಷಧಾರಿ,ಸಂಘಟಕ ಡಾ. ಜಿ.ಎಲ್. ಹೆಗಡೆ ಹಾಗೂ ಅರ್ಥಧಾರಿ,ಹವ್ಯಾಸಿ ವೇಷಧಾರಿ ಸರ್ಪಂಗಳ ಈಶ್ವರ ಭಟ್ ಆಯ್ಕೆಯಾಗಿದ್ದಾರೆ. ಇದೇ ಜುಲೈ 12, ಶನಿವಾರದಂದು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂಬುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರತೀ ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ.
Be the first to comment on "ಸರ್ಪಂಗಳ ಈಶ್ವರ ಭಟ್, ಡಾ. ಜಿ. ಎಲ್. ಹೆಗಡೆ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ."