ಪ್ರಮುಖ ಸುದ್ದಿಗಳು

ಕರಾವಳಿ ಪ್ರವಾಸೋದ್ಯಮ ಯೋಜನೆ : ಸ್ಥಳೀಯ ಮೀನುಗಾರರಿಗೆ ಆದ್ಯತೆ ; ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.

ಜಾಹೀರಾತು

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ ಚರ್ಚೆಗಳನ್ನು ನಡೆಸಿ ಬಳಿಕ ಸ್ಥಳೀಯರೊಂದಿಗೆ ಕೂಡ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿ ರಾಜೇಂದ್ರ ಕುಮಾರ್ ಅವರು ಮಾತನಾಡಿ,2024-2029ರ ಉದ್ದೇಶಿತ ರಾಜ್ಯದ ಪ್ರವಾಸೋದ್ಯಮ ಯೋಜನೆಯಲ್ಲಿ ದೊಡ್ಡಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕರಾವಳಿಯ ಬೀಚ್ ಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ. ಈ ಸಂದರ್ಭದಲ್ಲಿ ಸ್ಥಳೀಯರಿಗೆ ಉದ್ಯೋಗ ಹಾಗೂ ವ್ಯವಹಾರಕ್ಕೆ ಪೂರಕವಾಗುವಂತೆ ಹೆಚ್ಚಿನ ಚಿಂತನ ಮಂಥನ ನಡೆಸುವುದಾಗಿ ತಿಳಿಸಿದರು.

ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಉಪಸ್ಥಿತರಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್, ಮೀನುಗಾರರ ಮುಖಂಡ ಚೇತನ್ ಬೇಂಗ್ರೆ, ಲಕ್ಷ್ಮಣ್ ಅವರು ಮಾತನಾಡಿ, ಪ್ರವಾಸೋದ್ಯಮ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಸ್ಥಳೀಯ ಮೀನುಗಾರರಿಗೆ ಅನುಕೂಲ ವಾಗುವಂತೆ ವ್ಯವಹಾರ , ಉದ್ಯಮ ಹಾಗೂ ಉದ್ಯೋಗವನ್ನು ರೂಪಿಸುವ ಬಗ್ಗೆ ಮನವಿ ಮಾಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts