ಪ್ರಮುಖ ಸುದ್ದಿಗಳು

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಜೂ.15ರಂದು ಹಲಸು ಮೇಳ – ಆಹಾರೋತ್ಸವ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.15ರಂದು ಬೆಳಗ್ಗೆ ಗಂಟೆ 8ರಿಂದ ಸಂಜೆ ಗಂಟೆ 6ರವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ. ಮಾತೆಯರು, ಮಹನೀಯರು ತಯಾರಿಸಿದ ಅತ್ಯುತ್ತಮ ಆಹಾರವನ್ನು ಆರೋಗ್ಯಪೂರ್ಣ ಜೀವನಕ್ಕಾಗಿ ಪಡೆದುಕೊಳ್ಳಬಹುದಾಗಿದೆ.

ಜಾಹೀರಾತು

ಮಂಗಳೂರು ಹವ್ಯಕ ಮಂಡಲದ ಕಾರ್ಯಕರ್ತರು ಸೇವಾ ರೂಪದಲ್ಲಿ ಈ ಹಲಸು ಮೇಳ ಆಹಾರೋತ್ಸವವನ್ನು ಆಯೋಜಿಸುತ್ತಿದೆ. ಈ ಮೇಳದಲ್ಲಿ ಹಲಸು, ಮಾವು, ಬಾಳೆಯ ವಿವಿಧ ರೀತಿಯ ತಿಂಡಿಗಳು ಸಿಗಲಿವೆ. ಹಲಸಿನ ಹಣ್ಣಿನ ಪಾಯಸ, ಬೆರಟಿ ಪಾಯಸ, ಹಲಸಿನ ಬೀಜ ಪಾಯಸ, ಹಲಸಿನ ಕಾಯಿ ದೋಸೆ/ಶುಂಠಿ ಚಟ್ನಿ, ಹಲಸಿನ ಹಣ್ಣಿನ ದೋಸೆ, ಹಲಸಿನಹಣ್ಣಿನ ಜಿಲೇಬಿ, ಸೊಳೆ ರೊಟ್ಟಿ, ಗುಜ್ಜೆ ಮಂಚೂರಿ, ಹಲಸಿನ ಬೀಜದ ಚಟ್ಟಂಬಡೆ, ಹಲಸಿನ ಕಾಯಿ ಸೋಂಟೆ, ಹಲಸಿನ ಕಾಯಿ ಬೋಂಡ, ಬಾಳೆಕಾಯಿ ಚಿಪ್ಸ್, ಹಲಸಿನ ಕಾಯಿ ಹಪ್ಪಳ, ಹಲಸಿನ ಹಣ್ಣಿನ ಹಪ್ಪಳ, ಬಾಳೆಹಣ್ಣಿನ  ಹಲ್ವ, ಹಲಸಿನ ಹಣ್ಣಿನ ಹಲ್ವ, ಹಲಸಿನ ಬೀಜದ ಅದ್ದಿಹಿಟ್ಟು, ಮಾವಿನ ಹಣ್ಣಿನ ಮಾಂಬಳ, ಹಲಸಿನ ಹಣ್ಣಿನ ಸೊಳೆ, ಹಲಸಿನ ಕಾಯಿ ಸೊಳೆ, ಗುಜ್ಜೆ ಪಲಾವ್, ಹಲಸಿನ ಹಣ್ಣು ಕೊಟ್ಟಿಗೆ, ಹಲಸಿನ ಹಣ್ಣು ಗೆಣಸಲೆ, ಬಾಳೆಕಾಯಿ ದೋಸೆ, ಹಲಸಿನ ಕಾಯಿ ಪೋಡಿ, ಹಲಸಿನ ಹಣ್ಣಿನ ಬನ್ಸ್, ಹೋಳಿಗೆ, ಹಲಸಿನ ಹಣ್ಣಿನ ಗುಳಿಅಪ್ಪ, ಚಕ್ಕುಲಿ, ಹಲಸಿನ ಬೀಜದ ಸೂಪ್, ಹಲಸಿನಕಾಯಿ ಪಲಾವ್, ಅತಿರಸ, ಸಕ್ಕರೆ ಬೆರಟಿ, ಕಾಫಿ, ಟೀ, ಕಷಾಯ, ಮಾವಿನಹಣ್ಣು, ಮಾವಿನಹಣ್ಣಿನ ರಸಾಯನ, ಮಸಾಲೆ ಮಜ್ಜಿಗೆ ನೀರು ಪಡೆಯಬಹುದು ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts