ಬಂಟ್ವಾಳ

ಪಾಣೇರ್ ಸಂಕ ಸಂಚಾರ ತಾತ್ಕಾಲಿಕ ಬಂದ್

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ಕಟ್ಟಲಾದ ಪಾಣೆಮಂಗಳೂರು ಸೇತುವೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತವೆ ಶಿಥಿಲಾವಸ್ಥೆಯಲ್ಲಿದ್ದು, ಈ ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನೆಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿತ್ತು. ಪ್ರಸ್ತುತ ೀ ಕಬ್ಬಿಣದ ಕಮಾನನ್ನು ಹಾನಿಗೊಳಿಸಿ, ಘನವಾಹನಗಳು ಸಂಚರಿಸುತ್ತಿರುವುದು ವರದಿಯಾಗಿರುತ್ತದೆ. ಈ ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ಸಂಚಾರಕ್ಕೆ ಅಪಾಯಕಾರಿಯಾಗಿರುವುದಲ್ಲದೆ, ಸೇತುವೆಯ ಧಾರಣಾ ಸಾಮರ್ಥ್ಯದ ಕುರಿತು ಸಕ್ಷಮ ಇಲಾಖೆಯಿಂದ  ವರದಿ ಬರುವವರೆಗೆ ಸೇತುವೆ ಮೇಲೆ ಸಂಚಾರ ಮಾಡುವುದನ್ನು ಅಪಾಯಕಾರಿ ಎಂದು ಪರಿಗಣಿಸಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 68ರ ಪ್ರಕಾರ ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ.

ಪಾಣೆಮಂಗಳೂರು ಸೇತುವೆ ಮೇಲೆ ವಾಹನ ಸಂಚಾರ, ಜನಸಂಚಾರವನ್ನು ಸೇತುವೆಯ ಧಾರನಾ ಸಾಮರ್ಥ್ಯದ ಬಗ್ಗೆ ವರದಿ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವವರೆಗೆ ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ. ಈ ಆದೇಶವನ್ನು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts