ಮಂಗಳೂರು: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯು.ಪಿ.ಎಸ್.ಸಿ (UPSC) ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ADVERTISMENT
ಅರ್ಜಿ ಸಲ್ಲಿಸಲು ಜೂನ್ 21 ಕೊನೆಯ ದಿನ. ತರಬೇತಿ ಬೆಂಗಳೂರಿನಲ್ಲಿ ನಡೆಯಲಿದೆ. ಅರ್ಜಿದಾರರು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಮಾರ್ಗಸೂಚಿಗಳನ್ವಯ ಅರ್ಜಿ ಸಲ್ಲಿಸಲು ಸೂಚಿಸಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ, ಹಾಗೂ ಹತ್ತಿರದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖೈ;8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ಅರ್ಹ ಅಲ್ಪಸಂಖ್ಯಾತರ ಸಮುದಾಯ ಅಭ್ಯರ್ಥಿಗಳಿಂದ IAS ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಅರ್ಜಿ ಆಹ್ವಾನ"