ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ: ಮಕ್ಕಳ ಹೃದ್ರೋಗ ಶಾಸ್ತ್ರ ಕಾರ್ಯಾಗಾರ

ಮಂಗಳೂರು: ದೇಶದಲ್ಲಿ ಇತ್ತೀಚೆಗೆ ಮಕ್ಕಳಲ್ಲಿ ಹೃದ್ರೋಗ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ಇದರ ಮಾಹಿತಿ, ಜಾಗೃತಿ, ಮುಂಜಾಗೃತ ಕ್ರಮ, ಆಧುನಿಕ ಚಿಕಿತ್ಸಾ ವಿಧಿವಿಧಾನಗಳ ಬಗ್ಗೆ ಈ ವೈದ್ಯಕೀಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಹೇಳಿದರು.

ಜಾಹೀರಾತು

ಅವರು ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನಲ್ಲಿ ಶಿಶು ಮತ್ತು ಮಕ್ಕಳ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ತಮ್ಮ ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ಎರಡು ದಿನ ಅವಧಿಯ ಮಕ್ಕಳ ಹೃದ್ರೋಗ ಶಾಸ್ತ್ರ ಶಿಕ್ಷಣ, ಆರೈಕೆ, ಮತ್ತು ಚಿಕಿತ್ಸೆಯ ಶನಿವಾರ ಕಾಲೇಜಿನ ಡ್ರೋಮ್ ಸಭಾಂಗಣದಲ್ಲಿ ಜರುಗಿದ ರಾಜ್ಯ ಮಟ್ಟದ ವೈದ್ಯಕೀಯ ಕಾರ್ಯಾಗಾರವನ್ನು ಉದ್ಘಾಟಿಸಿ ವೈದ್ಯಕೀಯ ವೃಂದ ಮತ್ತು ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿ ವೃಂದದವರನ್ನು ಉದ್ದೇಶಿಸಿ ಮಾತನಾಡಿದರು.

ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹಮಾನ್ ಮಾತನಾಡಿ, ವೈದ್ಯರು ನಿರಂತರ ಅಧ್ಯಯನ, ಸಂಶೋಧನೆಯಲ್ಲಿ ತೊಡಗಿ ನೂತನ ಅವಿಷ್ಕಾರಗಳಿಗೆ ಸ್ಪಂದಿಸಿ ತಮ್ಮ ವೈದ್ಯಕೀಯ ಜ್ಞಾನವನ್ನು ವೃದ್ದಿಸಿ ಯಶಸ್ಸು ಸಾಧಿಸಿ ಜನಮನ್ನಣೆಗೆ ಪಾತ್ರರಾಗಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕೊಚ್ಚಿನ್ ನಗರ ಮೂಲದ ಡಾ. ಕೃಷ್ಣ ಕುಮಾರ್ ಹಾಗೂ ಬೆಂಗಳೂರು ನಗರ ಮೂಲದ ಡಾ. ಸೇಜಲ್ ಶಾರವರು ಹೃದ್ರೋಗ ಶಾಸ್ತ್ರ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆ, ನೀಡಿದ ಅಮೂಲ್ಯ ಕೊಡುಗೆ ಮತ್ತು ಸಾಧಿಸಿದ ಅಮೋಘ ಸಾಧನೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಶಹನವಾಜ್ ಮಣಿಪಾಡಿಯವರು ಕಾರ್ಯಾಗಾರದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿ, ದೇಶದ ನಾನಾ ಭಾಗಗಳಿಂದ ಭಾಗವಹಿಸಿದ ಖ್ಯಾತ, ನುರಿತ, ಮಕ್ಕಳ ಹೃದ್ರೋಗ ಪ್ರವೀಣರು, ಶಾಸ್ತ್ರ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ, ಮಕ್ಕಳಲ್ಲಿ ಕಾಣುವ ಹೃದಯ ಸಂಬಂಧಿ ವಿವಿಧ ರೋಗಗಳ ಕಾರಣ, ಲಕ್ಷಣ, ಜಾಗೃತಿ ಮತ್ತು ನಾನಾ ಚಿಕಿತ್ಸಾ ವಿಧಿವಿಧಾನಗಳ ಬಗ್ಗೆ ಅತಿಥಿ ಉಪನ್ಯಾಸ ನೀಡಲಿರುವರು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಕಣಚೂರು ವೈದ್ಯಕೀಯ ವಿಜ್ಞಾನ ಸಲಹ ಸಮಿತಿ ಸದಸ್ಯ ಡಾ. ಎಂ.ವಿ. ಪ್ರಭು, ಮಕ್ಕಳ ಶಾಸ್ತç ವಿಭಾಗದ ಡಾ. ಶಂಶಾದ್ ಎ. ಖಾನ್, ಸಂಸ್ಥೆಯ ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್, ವೈದ್ಯಕೀಯ ಸಹ ಅಧೀಕ್ಷಕ ಡಾ. ಅಂಜನ್ ಕುಮಾರ್, ಕಾರ್ಯಗಾರದ ಸಲಹೆಗಾರರಾದ ಡಾ. ಪ್ರೇಮ್ ಆಳ್ವ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಡಾ. ಚೇತನ್ ತಾಂಡೆಲ್ ವಂದಿಸಿದರು. ಈ ಕಾರ್ಯಾಗಾರದಲ್ಲಿ ಸುಮಾರು 150 ವೈದ್ಯಕೀಯ ಪ್ರತಿನಿಧಿಗಳು ಸಕ್ರೀಯವಾಗಿ ಭಾಗವಹಿಸಿದ್ದರು. ಡಾ. ವರ್ಷ ಸ್ವಾಗತಿಸಿದರು ಮತ್ತು ಡಾ. ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ: ಮಕ್ಕಳ ಹೃದ್ರೋಗ ಶಾಸ್ತ್ರ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*