DAKSHINA KANNADA NEWS UPDATE: ಮಳೆ – ಸಂಪೂರ್ಣ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.

ಜಾಹೀರಾತು

Near KMC ATTHAVARA

ನೆರೆ ಉಂಟಾಗುವ ಪ್ರದೇಶಗಳ ಮೇಲೆ ತೀರಾ ನಿಗಾ ವಹಿಸಿ ಎಲ್ಲಾ ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಬೇಕು. ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕು. ಎಲ್ಲಾ ತಾಲೂಕು ಹಾಗೂ ಮಹಾನಗರಪಾಲಿಕೆ ಕಂಟ್ರೋಲ್‌ ರೂಂ ನಿರಂತರ ಕಾರ್ಯಾಚರಣೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮಳೆ ಅನಾಹುತ ಸ್ಥಳಗಳಿಗೆ ಭೇಟಿ:  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಶನಿವಾರ ನಗರದಲ್ಲಿ ಮಳೆ ನೀರು ನಿಂತು ಸಮಸ್ಯೆಗೀಡಾದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಂಪ್ ವೆಲ್ ಗೆ ಭೇಟಿ ನೀಡಿ, ಮಳೆ ನೀರು ಸರಾಗ ಹರಿವಿನ ಸಮಸ್ಯೆಗಳ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

12 ಕುಟುಂಬಗಳು ಪುನರ್ವಸತಿ ಕೇಂದ್ರಕ್ಕೆ: ಮಂಗಳೂರು‌ ನಗರದ ಅತ್ತಾವರ ಸೇರಿದಂತೆ ಕೇಂದ್ರ ಭಾಗದ ವಿವಿದೆಡೆ ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಗೀಡಾದ 12 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇವರಿಗೆ ಮಹಾನಗರಪಾಲಿಕೆ ವತಿಯಿಂದ ಪುರಭವನ ಆವರಣದಲ್ಲಿ ತಾತ್ಕಾಲಿಕ ಪುನರ್ವಸತಿ‌ ಕೇಂದ್ರದಲ್ಲಿ ಆಶ್ರಯ ನೀಡಿ‌, ಆಹಾರ ಮತ್ತು ಅಗತ್ಯ ಸಾಮಾಗ್ರಿಗಳನ್ನು ಒದಗಿಸಲಾಗಿದೆ. ನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "DAKSHINA KANNADA NEWS UPDATE: ಮಳೆ – ಸಂಪೂರ್ಣ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*