ರಾಷ್ಟ್ರೀಯ ಹೆದ್ದಾರಿಯ ಲಾವತ್ತಡ್ಕ ಎಂಬಲ್ಲಿ ಕಾರ್ಕಳದಿಂದ ಕಾರ್ಕಳದಿಂದ ಧರ್ಮಸ್ಥಳ ಮೂಲಕ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸು, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಕಾರ್ಕಳ ಪಡುಮನೆ ನಿವಾಸಿ ಶಂಕರನಾರಾಯಣ ಭಟ್ (41) ಸಾವನ್ನಪ್ಪಿದ್ದಾರೆ. ಗಾಯಗೊಂಡ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.