ಕಾಡುಮಠದಲ್ಲಿ ಮನೆ ಕುಸಿದಿರುವುದು
ಬಿಮೂಡ ಗ್ರಾಮದ ಉಮಾ ಎಸ್ ಭಟ್ ಅವರ ವಾಸ್ತವ್ಯದ ಮನೆಗೆ ಬರೆ ಜರಿದು ಬಿದ್ದು ಆಂಶಿಕ ಹಾನಿಯಾಗಿರುತ್ತದೆ
ಕಡೂರು ಕಾಞಂಗಾಡ್ ರಾಜ್ಯ ಹೆದ್ದಾರಿಯ ಪಾತ್ರ ತೋಟ ಎಂಬಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳವನ್ನು ವಿಟ್ಲ ಪೋಲೀಸ್ ಹಾಗೂ ವೀರಕಂಭ ಪಂಚಾಯತ್ ಉಪಾಧ್ಯಕ್ಷರು, ಸಿಬ್ಬಂದಿ ಜೊತೆ ಪರಿಶೀಲನೆ ನಡೆಸಲಾಯಿತು ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಟೇಪ್ ಅನ್ನು ಸುತ್ತಲೂ ಅಳವಡಿಸಲಾಯಿತು.
ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಕುಕ ಎಂಬಲ್ಲಿ ಗುಡ್ಡೆ ಜರಿದು ರಸ್ತೆ ಸಂಪೂರ್ಣ ಬಂದ್ ಆಗಿದ್ದು ಗ್ರಾಮ ಪಂಚಾಯತ್ ವತಿಯಿಂದ ತೆರವು ಕಾರ್ಯ ನಡೆಯಿತು.
ಪಿಲಿಮೊಗರು ಗ್ರಾಮದ ಸುನ್ನಡಪೊಲಿ ಎಂಬಲ್ಲಿ ಗುಡ್ಡ ಜರಿದು ಬುಡೋಳಿ ಗ್ರಾಮದಲ್ಲಿ ಹಾದು ಹೋಗುತ್ತಿರುವ ತೋಡಿನ ಮೇಲೆ ಬಿದ್ದು ಸಮೀಪದಲ್ಲಿರುವ ತೋಟಗಳಿಗೆ ನೀರು ಬಂದಿರುತ್ತದೆ ಜೆಸಿಬಿ ಯಂತ್ರದಿಂದ ತೋಡು ಬಿಡಿಸಿ ಕೊಡುವ ಕಾರ್ಯ ನಡೆಯಿತು.
ಮೇರಮಜಲು ಗ್ರಾಮದ ಕಂಗಿತೋಟ ಮೀನಾಕ್ಷಿ ಅವರ ಮನೆ ಗೋಡೆ ಜರಿದಿರುತ್ತದೆ. ಪ್ರಸ್ತುತ ಮನೆಯಲ್ಲಿ ಯಾರೂ ವಾಸವಿರುವುದಿಲ್ಲ.
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾರ್ನೆಮಿಗುಡ್ಡೆಯ ಮುನೀರ ಎಂಬುವರ ಕಾಂಪೌಂಡ್ ಕುಸಿದಿರುತ್ತದೆ.
ಮೆರಮಜಲು ಗ್ರಾಮದ ಅಬ್ಬೆಟ್ಟು ಎಂಬಲ್ಲಿ ನೋಣಯ ಅವರ ಮನೆ ಗೋಡೆಗೆ ಗುಡ್ಡ ಕುಸಿದು ಭಾಗಶಃ ಹಾನಿ ಸಂಭವಿಸಿದೆ
ಸಂಗಬೆಟ್ಟು ಗ್ರಾಮದ ಕಂಡಿಗ ಎಂಬಲ್ಲಿನ ರೋಶನ್ ಸಿಕ್ವೆರಾ ಶೌಚಾಲಯ ಕಟ್ಟಡ ಕುಸಿದಿರುತ್ತದೆ
ತೆಂಕಕಜೆಕಾರು ಗ್ರಾಮದ ಬಾರ್ದೋಟ್ಟು ಎಂಬಲ್ಲಿನ ಆಯಿಷಾ ಅವರ ದನದ ಹಟ್ಟಿ ಹಾಗೂ ಕಾಂಪೌಂಡ್ ಕುಸಿದು ಬಿದ್ದಿರುತ್ತದೆ.
ಪಾಣೆಮಂಗಳೂರು.ಗ್ರಾಮದ ಬಂಗ್ಲೆಗುಡ್ಡೆ ಎಂಬಲ್ಲಿ ಪಿ. ಬಿ ಅಬೂಬಕ್ಕರ್ ರವರ ಮನೆಯ ಶೌಚಾಲಯ ಮತ್ತು ಸ್ನಾನಗೃಹಕ್ಕೆ ಮಳೆಗಾಳಿಯಿಂದ ಹಾನಿಯಾಗಿರುತ್ತದೆ
ಕರೋಪಾಡಿ ಗ್ರಾಮದ ಕಲ್ಕಾರು ಎಂಬಲ್ಲಿನ ರಹಮತ್ ಅವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ.
ಅಮ್ಟಾಡಿ ಬಾಂಬಿಲ ತಲಂಬಿಲ ರಸ್ತೆಯಲ್ಲಿ ಗುಡ್ಡ ಜರಿದಿದ್ದು, ಮಣ್ಣು ತೆರವು ಕಾರ್ಯ ನಡೆಯಿತು.
ಅಮ್ಟಾಡಿ ಬಾಂಬಿಲ ತಲಂಬಿಲ ರಸ್ತೆಯಲ್ಲಿ ಗುಡ್ಡ ಜರಿದಿದ್ದು, ಮಣ್ಣು ತೆರವು ಕಾರ್ಯ ನಡೆಯಿತು.
ಪುಣಚ ಗ್ರಾಮದ ವಾರಿಜ ನಾಯ್ಕ ಅವರ ವಾಸ್ತವ್ಯದ ಮನೆಗೆ ಗುಡ್ಡ ಕುಸಿದು ಹಾನಿಯಾಗಿರುತ್ತದೆ.
ಅಮ್ಮುಂಜೆ ಗ್ರಾಮದಲ್ಲಿ ಅಪಾಯಕಾರಿ ಗುಡ್ಡ ಬಳಿಯ ಜನರನ್ನು ಸ್ಥಳಾಂತರಿಸಲಾಯಿತು.
ಪಾಣೆಮಂಗಳೂರು ಗ್ರಾಮದ ಬೋರುಗುಡ್ಡೆ ಎಂಬಲ್ಲಿ ಮಹಾಬಲ ಪೂಜಾರಿ ಅವರ ವಾಸ್ತವ್ಯದ ಮನೆಗೆ ತೀವ್ರ ಹಾನಿಯಾಗಿರುತ್ತದೆ
ವಿಟ್ಲ ಪಡ್ನೂರು ಗ್ರಾಮದ ಎರ್ಮೆನಿಲೆ ಎಂಬಲ್ಲಿ ಶೀನ ಪರವ ಬಿನ್ ಕರಿಯ ಪರವ ಅವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದಿರುತ್ತದೆ.ಮನೆಯವರು ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿರುತ್ತಾರೆ.
ಕಾಡುಮಠದಲ್ಲಿ ಮನೆ ಕುಸಿದಿರುವುದು