ಬಂಟ್ವಾಳ: ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ವ್ಯಾಪ್ತಿಯ ಕಲ್ಲಡ್ಕ-ವಿಟ್ಲ ಮುಖ್ಯ ರಸ್ತೆಯ ಕೆಲಿಂಜ ನಡು ವಲಚ್ಚಿಲ್ ಎಂಬಲ್ಲಿ ರಸ್ತೆ ಬದಿಯಲ್ಲಿ ಈಗಾಗಲೇ ಮಣ್ಣು ಕುಸಿದಿದ್ದು. ರಸ್ತೆ ಬದಿಯಲ್ಲಿ ಬೃಹತ್ ಗಾತ್ರ ಬಂಡೆ ಕಲ್ಲಿದ್ದು ಅಪಾಯಕಾರಿಯಾಗಿದ್ದು, ಸಮೀಪದ ಮನೆಯವರನ್ನು ಸ್ಥಳಾಂತರಿಸಲಾಗಿದೆ. ಈ ವಿಚಾರವನ್ನು ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಗಮನಕ್ಕೆ ಸ್ಥಳೀಯರು ತಂದಾಗ ವಿಟ್ಲ ಕಂದಾಯ ನಿರೀಕ್ಷಕ ಎಂ ಎನ್ ರವಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಸ್ಥಳೀಯ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾಗಿ ಕಂದಾಯ ಇಲಾಖೆ ಮಾಹಿತಿ ನೀಡಿದೆ.