ಯುವವಾಹಿನಿ ಬಂಟ್ವಾಳ ಘಟಕವು ಸಾಹಿತ್ಯ ಬರವಣಿಗೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕವಿ, ಸಾಹಿತಿ, ಸಂಘಟಕ ಬಿ.ತಮ್ಮಯ್ಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸಾಹಿತ್ಯ ಸ್ಪರ್ಧೆಯು ಸಾಹಿತ್ಯದ ಎರಡು ಪ್ರಕಾರಗಳನ್ನು ಕೇಂದ್ರೀಕರಿಸಿ ನಡೆಸಿದ್ದು ಅದರ ಫಲಿತಾಂಶ ಪ್ರಕಟಗೊಂಡಿದೆ. ಅತೀ ಸಣ್ಣಕಥೆ’ಸ್ಪರ್ಧೆಯಲ್ಲಿ ಸುಲ್ತಾನ್ ಮಾನ್ಸೂರು ಮಂಚಿ ಅವರ ಸಣ್ಣಕಥೆ ಜಾಥಾ ಪ್ರಥಮ ಸ್ಥಾನವನ್ನೂ, ಸ್ಮಿತಾ ಅಮೃತರಾಜ್ ಸಂಪಾಜೆ ಅವರ ಸಣ್ಣಕಥೆ ಸ್ಫೋಟ ದ್ವಿತೀಯ ಬಹುಮಾನ ಪಡೆದಿರುತ್ತದೆ.
ಜಾಹೀರಾತು
ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ರೂಪಕಲಾ ಆಳ್ವ ಅವರ ಬೂಬು ಎಂಬ ಮರಿ-ಮೊಮ್ಮಗಳು ಪ್ರಥಮ ಬಹುಮಾನವನ್ನೂ, ನಳಿನಿ ಭೀಮಪ್ಪ ದಾರವಾಡ ಅವರ ಮುಡಿಯಿಂದ ಜಾರುತಿಹವೋ…! ಲಲಿತ ಪ್ರಬಂಧ ದ್ವಿತೀಯ ಬಹುಮಾನವನ್ನು ಪಡೆದಿರುತ್ತದೆ. ಈ ಸ್ಪರ್ಧೆಗಳಲ್ಲಿ ನಾಡಿನ ಹಿರಿಕಿರಿಯ ಸಾಹಿತಿಗಳಿಂದ ನೂರಕ್ಕೂ ಹೆಚ್ಚಿನ ಪ್ರವೇಶಗಳು ಬಂದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸ್ಪರ್ಧೆಯ ವಿಜೇತರಿಗೆ ಯುವವಾಹಿನಿ ಆಯೋಜಿಸುವ ಕಾರ್ಯಕ್ರಮದಲ್ಲಿ ನಗದು ಪ್ರಶಸ್ತಿ ಪತ್ರದೊಂದಿಗೆ ಅಭಿನಂದಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಯುವವಾಹಿನಿ: ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ಫಲಿತಾಂಶ ಪ್ರಕಟ"