ಚಿಣ್ಣರಲೋಕ ಸೇವಾಬಂಧು ಬಂಟ್ವಾಳ, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ವತಿಯಿಂದ ಶೈಕ್ಷಣಿಕ ಸಂಭ್ರಮ 2025 ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಜೂನ್ 22ರಂದು ನಡೆಯಲಿದೆ.
ಅಧ್ಯಕ್ಷ ಮೋಹನದಾಸ ಕೊಟ್ಟಾರಿ ಮುನ್ನೂರು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ನಾಲ್ಕು ವರ್ಷಗಳಿಂದ ಬೋಳಂತೂರು ದಕಜಿಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದು ಮುನ್ನಡೆಸುತ್ತಿದ್ದೇವೆ ಯಕ್ಷಗಾನ, ಭರತನಾಟ್ಯ, ಸಂಗೀತ, ಜಾನಪದ ನೃತ್ಯ, ಚಿತ್ರಕಲೆ, ನಾಟಕ ತರಬೇತಿ ಚಟುವಟಿಕೆಗಳನ್ನು ಸಮಾನ ಮನಸ್ಕ ಮಿತ್ರರ ಸಹಕಾರದಿಂದ ನಡೆಸಿಕೊಂಡು ಬರುತ್ತಿದ್ದೇವೆ ಎಂದರು.
ಆಡಳಿತ ಟ್ರಸ್ಟಿ ತೇವು ತಾರಾನಾಥ ಕೊಟ್ಟಾರಿ ಮಾತನಾಡಿ, ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸಂಭ್ರಮ ನಡೆಯುತ್ತಿದೆ. ಈ ಬಾರಿ ನಾಲ್ವರಿಗೆ ವಿದ್ಯಾರ್ಥಿವೇತನ ಹಾಗೂ ಶಾಲೆಯ ಎಲ್ಲ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ನಡೆಯಲಿದೆ.ಶಾಲಾ ವಿದ್ಯಾರ್ಥಿಗಳಿಂದ ನೃತ್ಯಸಿಂಚನ ಹಾಘೂ ಮೋಹನದಾಸ ಕೊಟ್ಟಾರಿ ಮುನ್ನೂರು ಸಾರಥ್ಯದಲ್ಲಿ ಮೋಕೆದ ಕಲಾವಿದೆರ್ (ರಿ) ಬಂಟ್ವಾಳ ತಂಡದಿಂದ ತೆಲಿಪುವರಾ ಅತ್ತ್ ಬುಲಿಪುವರಾ ಎಂಬ ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 4.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಭಾ ಕಾರ್ಯಕ್ರಮ ಸಂಜೆ 5ಕ್ಕೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಇಬ್ರಾಹಿಂ ಕೈಲಾರ್, ರಾಮಕೃಷ್ಣ ರಾವ್, ಶೋಭಾ ಶೆಟ್ಟಿ ಉಪಸ್ಥಿತರಿದ್ದರು.