ಉಸ್ತುವಾರಿ ಸಚಿವರನ್ನು ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ಧಿಕ್ ಗುಡ್ಡೆಯಂಗಡಿ ನೇತೃತ್ವದ ನಿಯೋಗ ಭೇಟಿಯಾಗಿ ಈ ವಿಚಾರದ ಕುರಿತು ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿದ್ದರು
ಬಂಟ್ವಾಳ: ಪಾಣೆಮಂಗಳೂರು ಹಳೇ ಸೇತುವೆಯಲ್ಲಿ ತಜ್ಞರ ವರದಿ ಪಡೆದು ಕೂಡಲೇ ಕ್ರಮ ಕೈಗೊಳ್”ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಲಘುವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕುರಿತು ಬಂಟ್ವಾಳ ಪುರಸಭೆ ಅಧ್ಯಕ್ಷ ಬಿ.ವಾಸು ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವರಿಕೆ ಮಾಡಲಾಗಿತ್ತು. ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆ ನಡೆದು, ಮುಂದಿನ ದಿನಗಳಲ್ಲಿ ಸಂಭಂದಪಟ್ಟ ಇಲಾಖೆಯಿಂದ ಸೇತುವೆಯ ಸಾಮರ್ಥ್ಯ ಪರೀಕ್ಷೆ ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳುವಂತೆ, ಶೀಘ್ರ ಹಳೇ ಸೇತುವೆಯ ಧಾರಣಾ ಸಾಮರ್ಥ್ಯದ ಕುರಿತು ತಜ್ಞರ ವರದಿ ಪಡೆದುಕೊಳ್ಳಬೇಕು ಎಂದು ಸೂಚಿಸಿದರು. ಇದೇ ವೇಳೆ ಉಸ್ತುವಾರಿ ಸಚಿವರನ್ನು ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ಧಿಕ್ ಗುಡ್ಡೆಯಂಗಡಿ ನೇತೃತ್ವದ ನಿಯೋಗ ಭೇಟಿಯಾಗಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕುರಿತು ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿದ್ದರು. ಭೇಟಿ ವೇಳೆ ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ, ಅಬ್ದುಲ್ ಖಾದರ್ ಬಂಗ್ಲಗುಡ್ಡೆ, ಖಾಲಿದ್ ಬೋಗೋಡಿ, ಅಬ್ದುಲ್ ಮುತ್ತಲಿಬ್ ಹಾಗೂ ಇನ್ನಿತರರು ಹಾಜರಿದ್ದರು.