ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ಕಿಲ್ತೋಡಿ ಎಂಬಲ್ಲಿ ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಎಂಬಿಬ್ಬರ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಜೂನ್ 18ರ ರಾತ್ರಿ 11ರಿಂದ ಜೂನ್ 19ರ ಬೆಳಗ್ಗೆ 8ರ ಮಧ್ಯೆ ಅವಧಿಯಲ್ಲಿ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಶಂಕೆಯಂತೆ ಪ್ರಕರಣ ದಾಖಲಾಗಿದೆ.
ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಇದ್ದರೆ, ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಮೀಪದವರು ಬೆಳಗ್ಗೆಯಾದರೂ ಬಾಗಿಲು ತೆರೆಯಲಿಲ್ಲವೇಕೆ ಎಂದು ಸಂಶಯದಿಂದ ಗಮನಿಸಿದಾಗ ವಿಷಯ ಗೊತ್ತಾಗಿದ್ದು, ಕೂಡಲೇ ಪೊಲೀಸರ ಗಮನಕ್ಕೆ ತಂದರು.ಘಟನೆಗೆ ಸಂಬಂಧಿಸಿದಂತೆ, ಮೃತ ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಎಂಬವರ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 72/2025 U/S 103 BNS ಹಾಗೂ ಮೃತ ತಿಮ್ಮಪ್ಪ ಅವರ ಅಣ್ಣ ವಿಶ್ವನಾಥ ಸಜೀಪಮೂಡ, ಬಂಟ್ವಾಳ ಅವರ ದೂರಿನ ಮೇರೆಗೆ UDR No 25/2025 U/S 194 BNSS ರಂತೆ ಪ್ರಕರಣ ದಾಖಲಾಗಿದೆ..ಸ್ಥಳಕ್ಕೆ ಡಿವೈಎಸ್ಪಿ ವಿಜಯ ಪ್ರಸಾದ್, ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಕಲೈಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ತನಿಖೆ ನಡೆಸಿದರು.
Be the first to comment on "Bantwal: ಬಡಗುಂಡಿ ಸಮೀಪ ಕಿಲ್ತೋಡಿಯಲ್ಲಿ ಘಟನೆ: ಪತಿ, ಪತ್ನಿ ಶವವಾಗಿ ಪತ್ತೆ – Details"