Bantwal: ಬಂಟ್ವಾಳದಲ್ಲಿ ಮೂರು ದಿನಗಳ ತುಳುವೆರೆನ ತುಳುನಾಡ ಸಂತೆ ಆರಂಭ

ಬಂಟ್ವಾಳ ತುಳುಕೂಟ ವತಿಯಿಂದ ಬಂಟ್ವಾಳದ ಸ್ಪರ್ಶಾ ಸಭಾಂಗಣದಲ್ಲಿ ಶುಕ್ರವಾರ ಮೂರು ದಿನಗಳ ’ತುಳುವೆರೆನ ತುಳುನಾಡ ಸಂತೆ’ ಕುಕ್ಕು ಪೆಲಕಾಯಿ ಒಟ್ಟುಗು ತುಳು ಸಾಹಿತ್ಯ ಸಾಂಸ್ಕೃತಿಕ ರಂಗ್ ಕಾರ್ಯಕ್ರಮ ಆರಂಭಗೊಂಡಿದೆ. ತುಳುನಾಡ ಸಂತೆಯನ್ನು ಶಾಸಕ ರಾಜೇಶ್ ನಾಯ್ಕ್, ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಜಾಹೀರಾತು

ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತುಳು ಲಿಪಿ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತುಳುಕೂಟ ಸ್ಥಾಪಕಾಧ್ಯಕ್ಷ ಎ ಸಿ. ಭಂಡಾರಿ, ಮೂಡೂರು-ಪಡೂರು ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್ ನ್ಯಾಯವಾದಿ, ನೋಟರಿ ಅಶ್ವನಿ ಕುಮಾರ್ ರೈ, ಉದ್ಯಮಿ ಸತೀಶ್ ಭಂಡಾರಿ ಕುಳತ್ತಬೆಟ್ಟು, ಸ್ಕ್ಯಾಡ್ಸ್  ಅಧ್ಯಕ್ಷ ರವೀಂದ್ರ ಕಂಬಳಿ, ತುಳು ಲಿಪಿ ಶಿಕ್ಷಕಿ ಗೀತಾ ಲಕ್ಷ್ಮೀಶ್ ಶುಭ ಹಾರೈಸಿದರು. ತುಳುಕೂಟ ಕೋಶಾಕಾರಿ ಸುಭಾಶ್ಚಂದ್ರ ಜೈನ್ ಸ್ವಾಗತಿಸಿ, ಸ್ವಾಗತ ಸಮಿತಿ ಸಂಚಾಲಕ ಸುಕುಮಾರ್ ಬಂಟ್ವಾಳ ವಂದಿಸಿದರು. ಕಾರ್ಯದರ್ಶಿ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

On behalf of Bantwala Tulukuota, a three-day ‘Tuluverena Tulunada Santhe’ Kukku Pelakai Otgugu Tulu Sahitya Cultural Rang program has started on Friday at the Sparsha Hall of Bantwala.

FOR MORE DETAILS OF THIS EVENT CLICK HERE

ತುಳುಕೂಟ ಬಂಟ್ವಾಳದ ಅಟ್ಟನೆಡ್ ತುಳುವೆರೆನ ತುಳುನಾಡ ಸಂತೆ – ವಿವರಗಳು ಇಲ್ಲಿವೆ — Bantwalnews.com

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwal: ಬಂಟ್ವಾಳದಲ್ಲಿ ಮೂರು ದಿನಗಳ ತುಳುವೆರೆನ ತುಳುನಾಡ ಸಂತೆ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*