ಬಂಟ್ವಾಳ: ಕಂಟೈನರ್ ಡಿಕ್ಕಿಯಾಗಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪ ಮಾರಿಪಳ್ಳ ಬಳಿ 10ನೇ ಮೈಲುಕಲ್ಲು ಎಂಬಲ್ಲಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಶನಿವಾರ ಶಂಜೆ ನಡೆದಿದೆ. ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳಿಂಜಬೈಲು ನಿವಾಸಿ ಇಬ್ರಾಹಿಂ (47) ಎಂದು ಗುರುತಿಸಲಾಗಿದೆ. ಅವರು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ಕಂಟೈನರ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.