ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ಧನ್ಯತಾ ಕಾರ್ಯಕ್ರಮ ಮೆಲುಕು ವಂದನಾರ್ಪಣೆ ಬಂಟ್ವಾಳ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಒಟ್ಟು ಚಟುವಟಿಕೆಗಳ ವಿವರಗಳನ್ನು ಸಭೆಯ ಮುಂದಿಟ್ಟರು. ಸ್ಥಾಪಕಾಧ್ಯಕ್ಷರಾದ ಡಾ.ಬಿ. ವಸಂತ ಬಾಳಿಗಾ ಮತ್ತು ಪೂರ್ವ ರಾಜ್ಯಪಾಲರಾದ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ವಸಂತ ಕುಮಾರ್ ಶೆಟ್ಟಿ ಅತಿಥಿಗಳಾಗಿ ಬಾಗವಹಿಸಿದರು.
ಕಾರ್ಯದರ್ಶಿ ದೇವಿಕಾ ದಾಮೋದರ್, ಕೋಶಾಧಿಕಾರಿ ದೇವಪ್ಪ ಪೂಜಾರಿ, ಲಿಯೋ ಅಧ್ಯಕ್ಷೆ ಖುಷಿ ಟಿ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲೆಯ ನಾಯಕರು, ಸಂಸ್ಥೆಯ ಪೂರ್ವಾಧ್ಯಕ್ಷರು, ಕುಟುಂಬ ಸದಸ್ಯರು, ಸಂಸ್ಥೆಯ ಹಿತೈಷಿಗಳು ಮತ್ತಿತರರು ಬಾಗವಹಿಸಿದ್ದರು