ಜೂನ್ 24ರಂದು ವ್ಯವಸ್ಥೆ ಸುಧಾರಣಾ ಹಾಗೂ ನಿರ್ವಹಣಾ ಕಾಮಗಾರಿಗಳ ನಿಮಿತ್ತ ಬಂಟ್ವಾಳ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಬಂಟ್ವಾಳ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬೆಳಗ್ಗೆ 10ರಿಂದ ಸಂಜೆ 5ರವರೆಗೆ 110/33/11 ಕೆವಿ ಬಂಟ್ವಾಳ ವಿದ್ಯುತ್ ಉಪಕೇಂದ್ರ ವ್ಯಾಪ್ತಿಗೆ ಒಳಪಡುವ ಬಿ.ಸಿ.ರೋಡ್ ನಗರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.