
The development works in National Highway is in progress. A section of the Kalladka flyover was opened for traffic on June 2. Now, another section has been opened for traffic on Wednesday, June 25, allowing smooth travel on the flyover without any interruptions. Photo Courtesy by Kishor Peraje
KALLADKA FLYOVER: ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ ಹೆದ್ದಾರಿ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಜೂನ್ 2ರಂದು ಕಲ್ಲಡ್ಕ ಫ್ಲೈಓವರ್ ನ ಒಂದು ಭಾಗ ಸಂಚಾರಕ್ಕೆಂದು ತೆರೆದುಕೊಂಡಿತ್ತು. ಇದೀಗ ಇನ್ನೊಂದು ಭಾಗದಲ್ಲೂ ಬುಧವಾರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇದೀಗ ಸರಾಗವಾಗಿ ಯಾವುದೇ ಅಡೆತಡೆ ಇಲ್ಲದೆ ಫ್ಲೈಓವರ್ ನಲ್ಲಿ ಸಂಚರಿಸಬಹುದಾಗಿದೆ.
ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮೂಈ. ಉದ್ದದ ಹೆದ್ದಾರಿ ಕಾಮಗಾರಿ 2017ರಲ್ಲಿ ಎಲ್. ಆಂಡ್ ಟಿ ಕಂಪನಿಗೆ 821 ಕೋಟಿ ರೂಗಳಿಗೆ ವಹಿಸಲಾಗಿತ್ತು. ಹಲವು ಕಾರಣಕ್ಕೆ ವಿಳಂಬವಾಗಿ ಬಳಿಕ ಅರ್ಧದಲ್ಲೇ ಸ್ಥಗಿತಗೊಂಡಿತು. 2021ರಲ್ಲಿ 64 ಕಿ.ಮೀ. ಉದ್ದದ ಹೆದ್ದಾರಿಯನ್ನು 49 ಕಿ.ಮೀ ಹಾಗೂ 15 ಕಿ.ಮೀ. ಎಂದು ವಿಭಾಗಿಸಿ ಕೆಎನ್ ಆರ್ ಕನ್ಸ್ ಸ್ಟ್ರಕ್ಷನ್ಸ್ ಹೈದರಾಬಾದ್ ಹಾಗು ಎಂ. ಔತಡೆ ಪ್ರೈ. ಲಿ. ಮಹಾರಾಷ್ಟ್ರ ಕಂಪನಿಗಳಿಗೆ ಗುತ್ತಿಗೆ ನೀಡಲಾಯಿತು. ಅಲ್ಲಿಂದ ಕಾಮಗಾರಿಗೆ ವೇಗ ದೊರಕಿತು. ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ನೆಕ್ಕಿಲಾಡಿ, ಉಪ್ಪಿನಂಗಡಿ ಜಂಕ್ಷನ್, ಉಪ್ಪಿನಂಗಡಿ ಸುಬ್ರಹ್ಮಣ್ಯ ಕ್ರಾಸ್, ನೆಲ್ಯಾಡಿ, ಪೆರಿಯಶಾಂತಿಗಳಲ್ಲಿ ಓವರ್ ಪಾಸ್ ಮೇಲ್ಸೇತುವೆ ಹಾಗೂ ಕಲ್ಲಡ್ಕದಲ್ಲಿ 2.1 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಕಾಮಗಾರಿ ಏಕಕಾಲದಲ್ಲಿ ಆರಂಭಗೊಂಡಿತು.ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದರ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ ಗಳ ಫ್ಲೈಓವರ್ ಇದಾಗಿದೆ.
The development works in National Highway is in progress. A section of the Kalladka flyover was opened for traffic on June 2. Now, another section has been opened for traffic on Wednesday, June 25, allowing smooth travel on the flyover without any interruptions.
Be the first to comment on "KALLADKA FLYOVER: ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ"