2025ನೇ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Applications are invited from employees of various cooperative societies and banks for the regular and distance education Diploma in Cooperative Management course, commencing on July 1, 2025, for a duration of 6 months. candidates from Dakshina Kannada, Udupi, and Kasaragod districts are eligible.
ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜುಲೈ 10. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ನೀಡಲಾಗುವುದು.
ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಮತ್ತು ಇತರೆ ಎಲ್ಲಾ ರೀತಿಯ ಸಹಕಾರ ಸಂಘ/ಸಂಸ್ಥೆಗಳು ಮತ್ತು ಬ್ಯಾಂಕ್‍ಗಳ ಉದ್ಯೋಗ ಅವಕಾಶಗಳಲ್ಲಿನ ನೇಮಕಾತಿಗೆ ಸಹಕಾರ ಕಾಯಿದೆ ಮತ್ತು ನಿಯಮಗಳಿಗೆ ಅನುಸಾರವಾಗಿ ಆದ್ಯತೆ ಕಲ್ಪಿಸಲಾಗಿದೆ.
ಈ ಪಠ್ಯಕ್ರಮವು ಕೆ.ಎ.ಎಸ್ ಪರೀಕ್ಷೆಯ ಸಹಕಾರ ಮತ್ತು ಗ್ರಾಮೀಣ ಅಭಿವೃದ್ಧಿ ವಿಷಯ ಮತ್ತು ಸಹಕಾರ ಇಲಾಖೆಯ ಕೋ-ಆಪರೇಟಿವ್ ಇನ್‍ಸ್ಪೆಕ್ಟರ್ ಹುದ್ದೆ ಹಾಗೂ ಎಲ್ಲಾ ಸಹಕಾರ ಸಂಘ/ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಪೂರಕವಾಗಿದೆ.
ಸಹಕಾರ ಕಾಯ್ದೆ ನಿಯಮಗಳ ಅನ್ವಯ ಸಹಕಾರ ಸಂಘಗಳ ಅಧಿಕಾರಿ, ಸಿಬ್ಬಂದಿಗಳಿಗೆ ಡಿ.ಸಿ.ಎಂ. ಕೋರ್ಸ್ ಕಡ್ಡಾಯವಾಗಿದ್ದು ಸಹಕಾರ ಸಂಘ, ಸಂಸ್ಥೆಗಳಲ್ಲಿನ ಖಾಯಂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದೂರ ಶಿಕ್ಷಣ ಕೊರ್ಸ್‍ಗೆ ಪ್ರವೇಶ ನೀಡಲಾಗುವ್ಯದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08258-236561, ಮೊ:7022429440 ಸಂಪರ್ಕಿಸುವಂತೆ ಮೂಡಬಿದ್ರೆ ಕೆ.ಐ.ಸಿ.ಎಂ. ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
Be the first to comment on "ಸಹಕಾರ ಸಂಘ, ಬ್ಯಾಂಕ್ ಗಳ ಉದ್ಯೋಗಿಗಳ ಗಮನಕ್ಕೆ: ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ, ವಿವರಗಳು ಇಲ್ಲಿವೆ"