ಬಂಟ್ವಾಳ

Bantwal: ಮಾದಕ ದ್ರವ್ಯ ಮುಕ್ತ ಸಮಾಜ: ಪೊಲೀಸ್ ಇಲಾಖೆ ಸಹಿತ ಹಲವು ಸಂಘಟನೆಗಳೊಂದಿಗೆ ಬಂಟ್ವಾಳದಲ್ಲಿ ಅಭಿಯಾನ

ದ.ಕ.ಜಿಲ್ಲಾ ಪೋಲೀಸ್ ಇಲಾಖೆ,ಬಂಟ್ವಾಳ ವೃತ್ತದ ಪೋಲೀಸ್ ಠಾಣೆ ವತಿಯಿಂದ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್, ರೋಟರಿ ಕ್ಲಬ್ ಬಂಟ್ವಾಳ ಟೌನ್, ರೋಟರಿ ಕ್ಲಬ್ ಮೊಡಂಕಾಪು ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ 2025 ಕಾರ್ಯಕ್ರಮ ಬಿ.ಸಿ.ರೋಡ್ ನ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆಯಿತು.

ಜಾಹೀರಾತು

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್, ವಿದ್ಯಾಭ್ಯಾಸ ಮುಗಿಸಿ ಸಮಾಜದ ಮುಖ್ಯವಾಹಿನಿಗೆ ಬರುವ ವೇಳೆ ಮಾದಕ ದ್ರವ್ಯದ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಇತರರಿಗೂ ಹಂಚಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಡ್ರಗ್ಸ್ ವ್ಯಸನಿಯ ಜೀವನ ನರಕವಾದರೆ ಇಡೀ ಸಮಾಜಕ್ಕೆ ಸಮಸ್ಯೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ.ಜಯಶಂಕರ್ ಮತ್ತು ಡಾ.ಸಂಸ್ಕೃತಿ ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಇದರ ನಿಯೋಜಿತ ಅಧ್ಯಕ್ಷ ವಿಜಯ ಪೆರ್ನಾಂಡಿಸ್, ರೋಟರಿ ಕ್ಲಬ್ ಮೊಡಂಕಾಪು ಅದ್ಯಕ್ಷ ಅಲೆಕ್ಸಾಂಡರ್ ಲೋಬೋ, ಕಾರ್ಮೆಲ್ ಕಾನ್ವೆಂಟ್ ವಿದ್ಯಾ ಸಂಸ್ಥೆಯ ಪ್ರಿನ್ಸಿಪಾಲ್ ಭಗಿನಿ ಫೆಲ್ಸಿಟಾ ಎ.ಸಿ, ವಿಟ್ಲ ಜೂನಿಯರ್ ಕಾಲೇಜ್ ದೈಹಿಕ ಶಿಕ್ಷಕ ನಿರ್ದೇಶಕ ಶ್ರೀನಿವಾಸ ಗೌಡ, ಬಿ.ಮೂಡ ಸ.ಪ.ಪೂರ್ವ ಕಾಲೇಜು ಪ್ರಿನ್ಸಿಪಾಲ್ ಯೂಸುಫ್ ವಿಟ್ಲ, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಗ್ರಾಮಾಂತರ ಎಸ್.ಐ‌‌.ಮಂಜುನಾಥ್, ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ, ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ಎಸ್.ಐ.ಗಳಾದ ಸುತೇಶ್, ಸಂಜೀವ ಉಪಸ್ಥಿತರಿದ್ದರು. ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಬಿಸಿರೋಡುವರೆಗೆ ಮೊಡಂಕಾಪು, ವಿಠಲ‌ಪದವಿ ಪೂರ್ವ ಕಾಲೇಜು,ಹಾಗೂ ಬಿ.ಮೂಡ ಕಾಲೇಜಿನ ವಿದ್ಯಾರ್ಥಿಗಳ ಜಾಥ ಕಾರ್ಯಕ್ರಮ ನಡೆಯಿತು. ಪೊಲೀಸ್ ಇಲಾಖೆ ಸಿಬ್ಬಂದಿ ವಿವೇಕ್ ರೈ ಕಾರ್ಯಕ್ರಮ ನಿರ್ವಹಿಸಿದರು.

The ‘Campaign 2025 for Drug-Free Society’ program was held on Thursday at Ambedkar Bhavan in B.C. Road, organized by the D.K. District Police, Bantwal Circle Police Station, Education Department, Rotary Club Loreto Hills, Rotary Club Bantwal Town, and Rotary Club Modankapu in joint collaboration. Bantwal DYSP Vijay Prasad Addressed the gathering.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.