ಶಾಲಾ ಕಾಲೇಜುಗಳಲ್ಲಿ ನಡೆಯುವ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿ ಕೊಂಡಾಗ, ಅವರಲ್ಲಿ ಸುಪ್ತ ಪ್ರತಿಭೆಗಳು ಹೊರಹೊಮ್ಮುತ್ತವೆ. ವಿದ್ಯಾರ್ಥಿ ಜೀವನವು ಅಮೂಲ್ಯವಾದದು. ವಿದ್ಯಾರ್ಥಿ ದೆಸೆಯಲ್ಲಿ ಸಾಧನೆ ಮಾಡಿದರೆ ಭವಿಷ್ಯತ್ತಿನಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸುಬ್ರಹ್ಮಣ್ಯ ಭಟ್ ನುಡಿದರು.
ಸಜೀಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನ ಸಾಲಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಕಳೆದ ವರ್ಷದ ದ್ವಿತೀಯ ಪಿ ಯು ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿಯರ ಸನ್ಮಾನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತಾಡಿದರು.
ಅಧ್ಯಕ್ಷತೆಯನ್ನು ವಹಿಸಿದ ಪ್ರಿನ್ಸಿಪಾಲ್ ಡಾ. ಎನ್ ಎಸ್. ಜೈರಾಭಿ ಮಾತನಾಡಿ ತನ್ನ ಗುರಿಯನ್ನು ತಾವು ತಲುಪಿ ಸಮಾಜದ ಏಳಿಗೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಸಂಕೇಶ್, ಸದಸ್ಯರಾದ ವಿಶ್ವನಾಥ ಕೊಟ್ಟಾರಿ, ನಿಕಟಪೂರ್ವ ಪ್ರಿನ್ಸಿಪಾಲ್ ಸುರೇಶ್ ಬಿ. ಐತಾಳ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಾದ ಅಸ್ಪಿಯಾ ಮತ್ತು ಆಯಿಷತ್ ಮುಬೀನ ಬಾನು ಅವರನ್ನು ಸನ್ಮಾನಿಸಯಿತು. ಉಪನ್ಯಾಸಕಿ ಸ್ಫೂರ್ತಿ ಸ್ವಾಗತಿಸಿ, ಬಾಲಕೃಷ್ಣ ಎನ್ ವಿ ವಂದಿಸಿ, ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಹಿರಿಯ ಉಪನ್ಯಾಸಕ ಬಾಲಕೃಷ್ಣ ನಾಯ್ಕ್ ಕೆ. ಬೆಳ್ಳಾರೆ, ಶೋಭಾ, ಸಿಂಧೂಜ, ವೇದಾವತಿ, ಕಚೇರಿ ಸಿಬ್ಬಂದಿಗಳಾದ ಲತಾ, ಮತ್ತು ಸಂಜೀವ, ಪೋಷಕರಾದ ಅಬ್ದುಲ್ ಬಶೀರ್, ಸಾರಮ್ಮ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Be the first to comment on "SAJIPAMOODA: ಸಜೀಪಮೂಡ ಸರಕಾರಿ ಪದವಿಪೂರ್ವ ಕಾಲೇಜು: ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ"