ಬಂಟ್ವಾಳದ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ ಹಾಗೂ ಸಾಂಸ್ಕೃತಿಕ ಸಂಘದ ಉದ್ಘಾಟನೆ ನಡೆಯಿತು.
ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶಿವಾನಂದ ಬಾಳಿಗಾ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಹರಸಿದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಭಾಮಿ ಲಕ್ಷ್ಮಣ ಶೆಣೈ, ಪಿ. ಪ್ರಕಾಶ್ ಕಿಣಿ, ಶಾಲಾ ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿ’ಸೋಜ, ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ ಉಪಸ್ಥಿತರಿದ್ದರು.