ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಜುಲೈ 9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಇದನ್ನು ಯಶಸ್ವಿಗೊಳಿಸಲು ಎ.ಐ.ಸಿ.ಸಿ.ಟಿ.ಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕರ ಸಮಾವೇಶ ಬಿ.ಸಿ.ರೋಡ್ ನ ಡಾ. ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಸಮಾವೇಶವನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ರಾಜ್ಯ ಅಧ್ಯಕ್ಷರಾದ ಪಿ.ಪಿ ಅಪ್ಪಣ್ಣ ಮಾತನಾಡಿ ಕೇಂದ್ರದ ಬಿಜೆಪಿ ಸರಕಾರದ 11 ವರ್ಷಗಳ ಆಡಳಿತದಲ್ಲಿ ದುಡಿಯುವ ಜನರ ಸಂಕಷ್ಟಗಳು ಮಿತಿಮೀರಿದೆ. ದುಡಿಯುವ ಜನತೆಗೆ ಕನಿಷ್ಠ ಕೂಲಿ ಕೂಡಾ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದಿಂದ ಜಾರಿಯಾದ ಕಾರ್ಮಿಕ ಕಾನೂನುಗಳನ್ನು ತೆಗೆದು ಹಾಕಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದ್ದು ಈ ಸಂಹಿತೆಗಳು ಜಾರಿ ಆದರೆ ಕಾರ್ಮಿಕರು ಕಾರ್ಪೊರೇಟ್ ವರ್ಗದ ಗುಲಾಮರಾಗಬೇಕಾಗುತ್ತದೆ ಹಾಗೂ ಕಾರ್ಮಿಕರ ಎಲ್ಲಾ ಹಕ್ಕುಗಳು ಕಸಿಯಲ್ಪಡುತ್ತದೆ ಎಂದರು. ಈ ನಿಟ್ಟಿನಲ್ಲಿ ಜುಲೈ 9 ರಂದು ನಡೆಯುವ ಕಾರ್ಮಿಕರ ಅಖಿಲ ಭಾರತ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಪಾಲ್ಗೊಂಡು ಮುಷ್ಕರ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು . ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ರಾಮಣ್ಣ ವಿಟ್ಲ ಮಾತನಾಡಿ ಕಾರ್ಮಿಕ ವರ್ಗ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕೆಂದು ಕರೆ ನೀಡಿದರು.ಎ.ಐ.ಸಿ.ಸಿ.ಯು ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ವಿನಯ ನಡುಮೊಗರು, ಅಖಿಲ ಭಾರತ ಕಿಸಾನ್ ಮಹಾಸಭಾದ ಮುಖಂಡರಾದ ಮಹಮ್ಮದ್ ಇಕ್ಬಾಲ್ ಹಳೆಮನೆ, ಮಹಾವೀರ್ ಜೈನ್ ಪುತ್ತೂರು, ಸಂಜೀವ ಬೆಳ್ತಂಗಡಿ. ಸುಲೈಮಾನ್ ಕೆಳಿಂಜ, ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಮುಖಂಡರಾದ ಭರತ್ ಕುಮಾರ್, ಸತೀಶ್ ಕುಮಾರ್ ,ಕಟ್ಟಡ ಕಾರ್ಮಿಕರ ಸಂಘದ ಆನಂದ ಶೆಟ್ಟಿಗಾರ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮುಖಂಡರಾದ ಸುಧಾ ರಾವ್ ಬೆಳ್ತಂಗಡಿ ಮುಂತಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು .
IFTAAR ORGANISED BY FORMER MINISTER RAMANATHA RAI AT PANEMANGALORE (more…)