ಬಂಟ್ವಾಳ: ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿ ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಕಾರಣ, ಸಾರ್ವಜನಿಕರ ಸಹಾಯ ಕೋರಿ ಸಾಮಾಜಿಕ ಜಾಲತಾಣಗಳಲ್ಲಿ ಮನವಿಗಳು ಬಂದಿರುವ ಕುರಿತು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೆರವು ನೀಡಲಾಯಿತು.
ಆಡಳಿತ ಮಂಡಳಿ ಸಭೆಯಲ್ಲಿ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿರುವ ನೆಲೆಯಲ್ಲಿ ಈ ಬಗ್ಗೆ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳ ಸಹಕಾರದ ಜೊತೆಯಲ್ಲಿ ಸಂಘದ ವತಿಯಿಂದ ಒಟ್ಟಿಗೆ ರೂ 50 ಸಾವಿರ ಮೊತ್ತದ ಚೆಕ್ ನ್ನು ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ ಪೋಡುಂಬ ಮಗುವಿನ ಕುಟುಂಬಕ್ಕೆ ಸಂಘದ ಕಚೇರಿಯಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭ ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಅರಳ,ಮಂದಾರತಿ ಎಸ್ ಶೆಟ್ಟಿ, ಜಾರಪ್ಪ ನಾಯ್ಕ, ವಿಶ್ವನಾಥ್ ಶೆಟ್ಟಿಗಾರ್,ಶಿವ ಗೌಡ,ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾ, ಪ್ರಮುಖರಾದ ಸುನೀಲ್ ಶೆಟ್ಟಿ, ಪ್ರಕಾಶ್ ಪೂಜಾರಿ, ತಿಮ್ಮಯ್ಯ ಕರ್ಪೆ ಮತ್ತಿತರರು ಉಪಸ್ಥಿತರಿದ್ದರು
Be the first to comment on "Siddakatte: ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ"