ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಟ್ಯಾಂಕರ್ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಸಾವನ್ನಪ್ಪಿದವರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಚಿದಾನಂದ ಅವರು ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಮಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ. ಈ ಸಂದರ್ಭ ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿ ಅವರು ಸಾವನ್ನಪ್ಪಿದ್ದಾರೆ. ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿರುವ ಪತ್ನಿ, ಓರ್ವ ಹೆಣ್ಣು ಮತ್ತು ಓರ್ವ ಗಂಡು ಮಗುವನದನು ಅವರು ಅಗಲಿದ್ದಾರೆ.
ಅಜ್ಜಿಬೆಟ್ಟು ತಿರುವು ಅಪಘಾತಕ್ಕೆ ಕಾರಣವಾಗುತ್ತಿರುವುದು ಇದೇ ಮೊದಲಲ್ಲ. ಈ ಭಾಗದಲ್ಲಿ ಬಸ್ ಮೊದಲಾದ ಬೃಹತ್ ವಾಹನಗಳು ರಸ್ತೆಯಲ್ಲೇ ನಿಲ್ಲುವ ವೇಳೆ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುವ ಕುರಿತು ದೂರುಗಳು ಬರುತ್ತಿದ್ದು, ಇದೀಗ ಇದಕ್ಕೆ ಸಮೀಪವೇ ಅಪಘಾತವಾಗಿದೆ.
Be the first to comment on "ಬಿ.ಸಿ.ರೋಡ್ ನಲ್ಲಿ ಅಪಘಾತ, ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು"