MANGALORE CITY POLICE: ಮಂಗಳೂರು ನಗರ ಪೊಲೀಸ್ – ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಆಚರಣೆಗಾಗಿ ಷರತ್ತುಗಳು DETAILS

ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ, ಮಂಗಳೂರು ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಇವುಗಳಲ್ಲಿ ಮೊಹರಂ (06-07-2025), ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ (16-08-2025), ಗಣೇಶ ಚತುರ್ಥಿ (27-08-2025), ಈದ್ ಮಿಲಾದ್ (16-09-2025), Navarathri Sharada Mahotsava (22-09-2025  02-10-2025), Deepawali (20-10-2025 00 22-10-2025), Christmas(25-12-2025) .

ಜಾಹೀರಾತು

In view of the upcoming festive season, several public events and processions are scheduled in Mangalore City, including Moharram (06-07-2025), Krishna Janmashtami & Mosaru Kudike (16-08-2025), Ganesh Chaturthi (27-08-2025), Eid Milad (16-09-2025), Navarathri Sharada Mahotsava (22-09-2025 to 02-10-2025), Deepawali (20-10-2025 to 22-10-2025), and Christmas (25-12-2025), among others.

In this regard, and in the interest of public peace, safety, and legal compliance, the following conditions are hereby issued. All organizers seeking permission within Mangalore City Police limits shall strictly adhere to these conditions. Event-specific detailed instructions (routes, timings, sound, etc.) will be issued prior to each event. Organizers must mandatorily submit their details and contact details of responsible persons, failing which permission shall not be granted. These persons will be held accountable for any violations of below conditions or incidents, with legal action taken against them.

ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಈ ಕೆಳಗಿನ ಷರತ್ತುಗಳನ್ನು ಹೊರಡಿಸಲಾಗುತ್ತದೆ. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲ ಆಯೋಜಕರು ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು (ರಸ್ತೆ, ಸಮಯ, ಧ್ವನಿ ನಿಯಂತ್ರಣ) ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ವಿವರ ನೀಡದಿರುವ ಆಯೋಜಕರಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗುವುದಿಲ್ಲ. ಯಾವುದೇ ಷರತ್ತುಗಳ ಉಲ್ಲಂಘನೆ ಅಥವಾ ಘಟನೆಯ ಹೊಣೆಗಾರಿಕೆ ಈ ನಿಯೋಜಿತ ವ್ಯಕ್ತಿಗಳ ಮೇಲೆ ಇರಲಿದೆ.

1. ಕಡ್ಡಾಯ ಪೊಲೀಸ್ ಅನುಮತಿ ಮತ್ತು ಸಮಯದ ನಿರ್ಬಂಧ ಪಾಲನೆ:

ಪೊಲೀಸ್ ಹಾಗೂ ಇತರ ಸಂಬಂಧಿತ ಇಲಾಖೆಗಳ ಲಿಖಿತ ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸಬಾರದು. ಯಾವುದೇ ಕಾರಣಕ್ಕೂ ರಾತ್ರಿ 11:30 ಗಂಟೆಯ ನಂತರ ಯಾವುದೇ ಮೆರವಣಿಗೆಯನ್ನು ನಡೆಸಲು ಅನುಮತಿಸಲಾಗದು. ಈ ಸಮಯದ ನಂತರ ನಡೆಯುವ ಯಾವುದೇ ಸಮಾವೇಶವನ್ನು ಕಾನೂನುಬಾಹಿರ ಸಮಾವೇಶವೆಂದು ಪರಿಗಣಿಸಲಾಗುವುದು. ಖಾಸಗಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವುದಕ್ಕೆ ಆ ಸ್ಥಳದ ಮಾಲೀಕರಿಂದ ನಿರಾಕ್ಷೇಪಣಾ ಪತ್ರ’ (NOC) ಪಡೆದು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅನುಮೋದಿತ ಸ್ಥಳ ಅಥವಾ ಮಾರ್ಗದಲ್ಲಿಯೇ ಕಾರ್ಯಕ್ರಮ ನಡೆಸಬೇಕು. ಯಾವುದೇ ವ್ಯತಿರಿಕ್ತತೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

ಉಲ್ಲಂಘನೆ: ಭಾರತೀಯ ನ್ಯಾಯ ಸಂಹಿತ 2023 ರ ಕಲಂ: 189 (ಕಾನೂನುಬಾಹಿರ ಕೂಟ) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ: 92(1) (ಸಾರ್ವಜನಿಕ ಶಾಂತಿಯ ಉಲ್ಲಂಘನೆ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

————–
2. ಡಿಜೆ ಸಂಪೂರ್ಣ ನಿಷೇಧ; ಧ್ವನಿವರ್‌ಧಕಗಳಿಗೆ ಅನುಮತಿ ಅಗತ್ಯ:

ಡಿ.ಜೆ, ಜೋರಾದ ಸ್ಪೀಕ‌ರ್ ಅಥವಾ ಈ ರೀತಿಯ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆ ಸಂಪೂರ್ಣ ನಿಷೇಧವಾಗಿದೆ. ಧ್ವನಿವರ್ಧಕ ಬಳಕೆಗೆ ಮುಂಚಿತವಾಗಿ ಅನುಮತಿ ಪಡೆಯುವುದು ಅಗತ್ಯವಿದೆ ಮತ್ತು ರಾತ್ರಿ 10:00 ಗಂಟೆಗೆ ಅವುಗಳನ್ನು ಸ್ಥಗಿತಗೊಳಿಸಬೇಕು. ಶಬ್ದ ಮಟ್ಟಗಳು ಈ ಮಿತಿಗಳ ಒಳಗಿರಬೇಕು: ವಾಣಿಜ್ಯ ಪ್ರದೇಶ – 65 ಡೆಸಿಬಲ್, ವಾಸಸ್ಥಳ – 55 ಡೆಸಿಬಲ್, ನಿಶ್ಯಬ್ದ ವಲಯ – 50 ಡೆಸಿಬಲ್.

ಉಲ್ಲಂಘನೆ: ಕಲಂ: 270 ಮತ್ತು ಕಲಂ: 223 ಭಾರತೀಯ ನ್ಯಾಯ ಸಂಹಿತೆ 2023 (ಸಾರ್ವಜನಿಕ ಉಪದ್ರವ ಮತ್ತು ಆದೇಶಕ್ಕೆ ಅವಿಧೇಯತೆ), ಪರಿಸರ ಸಂರಕ್ಷಣಾ ಕಾಯ್ದೆ 1986 ರ ಕಲಂ: 15, ಶಬ್ದ ಮಾಲಿನ್ಯ ನಿಯಮಗಳು 2000, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 31 ಮತ್ತು ಸ್ಫೋಟಕಗಳ ಕಾಯ್ದೆ 1884 ಅಡಿಯಲ್ಲಿ ಕ್ರಮ.

————–
3. 24×7 ಭದ್ರತೆ ಮತ್ತು ಸಿಸಿಟಿವಿ ಕಡ್ಡಾಯ:
ಆಯೋಜಕರು ಸ್ಥಳದಲ್ಲಿ 24×7 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಹಾಗೂ 30 ದಿನಗಳ ಕಾಲ ದೃಶ್ಯಾವಳಿ ಸಂಗ್ರಹಿಸಬೇಕು.

ಉಲ್ಲಂಘನೆ: ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 31, 34, 70 ಮತ್ತು ಕರ್ನಾಟಕ ಸಾರ್ವಜನಿಕ ಸುರಕ್ಷತಾ ಕ್ರಮಗಳು (ಕ್ರಮಗಳು) ಕಾಯ್ದೆ, 2017 ರ ಕಲಂ: 3(1) ಮತ್ತು 6 ಅಡಿಯಲ್ಲಿ ಕ್ರಮ.

———————-
4. ಧಾರ್ಮಿಕ ವಿರೋಧಿ ಘೋಷಣೆಗಳು ಮತ್ತು ದ್ವೇಷ ಭಾಷಣ ದ್ವೇಷ ನಿಷೇಧ (ಮುದ್ರಣ & ಸಾಮಾಜಿಕ ಮಾಧ್ಯಮದಲ್ಲಿ):

ಯಾವುದೆ ಘೋಷಣೆಗಳು, ಭಿತ್ತಿಪತ್ರಗಳು, ಪ್ರದರ್ಶನಗಳು ಅಥವಾ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ವಿಷಯಗಳು ಯಾವುದೇ ಧರ್ಮದ ವಿರೋಧ ಅಥವಾ ದ್ವೇಷವನ್ನು ಉಂಟುಮಾಡುವ ರೀತಿಯಲ್ಲಿರಬಾರದು.

ಉಲ್ಲಂಘನೆ: ಕಲಂ:196 (ದ್ವೇಷಭಾವನೆ ಉಂಟುಮಾಡುವುದು), 299 (ಧಾರ್ಮಿಕ ನಂಬಿಕೆಗೆ ಅಪಮಾನ), 352/353 (ಸಾರ್ವಜನಿಕ ಕೇಡು) BNS 2023 ಅಡಿಯಲ್ಲಿ ಕ್ರಮ.

——-
5. ಜನಸಂದಣಿಗೆ ಕಡ್ಡಾಯ ಸ್ವಯಂಸೇವಕರ ನೇಮಕಾತಿ:

ಅನುಮತಿತ ಸಾಮರ್ಥ್ಯ ಮೀರದಂತೆ ಜನಸಮೂಹ ನಿಯಂತ್ರಿಸಬೇಕು. ಸಮರ್ಪಕವಾಗಿ ಸ್ವಯಂಸೇವಕರನ್ನು ನಿಯೋಜಿಸಿಕೊಳ್ಳಬೇಕು.

ಉಲ್ಲಂಘನೆ: ಕಲಂ: 125 BNS 2023 (ಇತರರ ದೈಹಿಕ ಸುರಕ್ಷತೆಗೆ ಅಪಾಯ), ಕಲಂ: 92 ಮತ್ತು ಕಲಂ: 30 ಕರ್ನಾಟಕ ಪೊಲೀಸ್ ಕಾಯ್ದೆ 963 ಅಡಿಯಲ್ಲಿ ಕ್ರಮ.

—————
6. ಪೆಂಡಾಲ್ ಎತ್ತರ ನಿಯಮಗಳು ಮತ್ತು ವಾಹನ ಸುರಕ್ಷಾ ನಿಯಮ ಪಾಲನೆ:
ಪೆಂಡಾಲು, ಕಾರ್ಯಕ್ರಮದಲ್ಲಿ ಬಳಸುವ ವಾಹನಗಳು ಇತ್ಯಾದಿಗಳ ಎತ್ತರಗಳ ಕಾನೂನು ಅಥವಾ ಮೆಸ್ಕಾಂ ಮಾನದಂಡಗಳನ್ನು ಮೀರುವಂತಿರಬಾರದು. ವಾಹನಗಳು ನೋಂದಣಿ ಪತ್ರ, ದೃಢತೆ ಪ್ರಮಾಣಪತ್ರ, ವಿಮೆ ಮತ್ತು PUC ಪ್ರಮಾಣ ಪತ್ರ ಹೊಂದಿರಬೇಕು.

ಉಲ್ಲಂಘನೆ: BNS 2023 ರ ಕಲಂ: 125 ಹಾಗೂ ಮೋಟಾರು ವಾಹನ ಕಾಯ್ದೆ 2019 ರ ಕಲಂ: 39, 130, 192 ಅಡಿಯಲ್ಲಿ ಕ್ರಮ.

————-
7. ಅಗ್ನಿಶಾಮಕ ಮತ್ತು ತುರ್ತು ವ್ಯವಸ್ಥೆಗಳ ಒದಗಿಕೆ:

ಅಗ್ನಿ ನಂದಕಗಳು, ಆಂಬುಲೆನ್ಸ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಟ್ಟುಕೊಳ್ಳುವುದು ಕಡ್ಡಾಯವಾಗಿವೆ. ಬೆಂಕಿಯ ಮೂಲಗಳ ಬಳಿಯಲ್ಲಿ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳನ್ನು ಇರಿಸಬಾರದು. ವಿಷಕಾರಿ ಬಣ್ಣಗಳು, ನಿಷೇಧಿತ ರಾಸಾಯನಿಕಗಳು, ಏಕ ಬಳಕೆ ಪ್ಲಾಸ್ಟಿಕ್ ನಿಷೇದಿಸಿದೆ.

ಉಲ್ಲಂಘನೆ: BNS 2023 ರ ಕಲಂ:125, 287 ಮತ್ತು ಪರಿಸರ ಕಾಯ್ದೆ 1986 ರ ಕಲಂ:15, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016 ಅಡಿಯಲ್ಲಿ ಕ್ರಮ.

—————–
8. ವಾಹನ ಸಂಚಾರ ಮುಕ್ತವಾಗಿ ನಿರ್ವಹಣೆ ಮತ್ತು ತುರ್ತು ಮಾರ್ಗಗಳ ನಿರ್ಬಂಧ:

ವಾಹನ ಮತ್ತು ಪಾದಚಾರಿ ಸಂಚಾರಕ್ಕೆ ಯಾವುದೇ ತಡೆ ಇಲ್ಲದಂತೆ ವ್ಯವಸ್ಥೆ ಮಾಡಬೇಕು. ತುರ್ತು ಮಾರ್ಗಗಳಿಗೆ ತಡ ಉಂಟುಮಾಡಬಾರದು. ನಿಗದಿತ ಸ್ಥಳದಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಇರಬೇಕು.

ಉಲ್ಲಂಘನೆ: BNS 2023 ರ ಕಲಂ: 126(2), 285, 194E ಮತ್ತು ಮೋಟಾರು ವಾಹನ ಕಾಯ್ದೆ 2019 ರ ಕಲಂ122, 201 ಅಡಿಯಲ್ಲಿ ಕ್ರಮ.

——————–
9. ಸಾರ್ವಜನಿಕ/ಖಾಸಗಿ ಆಸ್ತಿಗೆ ಹಾನಿ ಮಾಡಬಾರದು:

ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯುಂಟುಮಾಡಬಾರದು.

ಉಲ್ಲಂಘನೆ: BNS 2023 ರ ಕಲಂ:117/118, 324/326 ಮತ್ತು ಕರ್ನಾಟಕ ಸಾರ್ವಜನಿಕ ಆಸ್ತಿ ಹಾನಿ ತಡ ಕಾಯ್ದೆ 1984 ರ ಕಲಂ: 3 ಅಡಿಯಲ್ಲಿ ಕ್ರಮ.

—————————-
10. ಸಮಯ, ಕಾರ್ಯಕ್ರಮ ವಿವರ ಮತ್ತು ಪೊಲೀಸ್ ಸೂಚನೆ ಪಾಲನೆ:

ಕಾರ್ಯಕ್ರಮದ ಪೂರ್ಣ ವಿವರಗಳನ್ನು ಮುಂಚಿತವಾಗಿ ನೀಡಬೇಕು. ಅನುಮತಿ ಪತ್ರದಲ್ಲಿ ನೀಡಿದ ಸಮಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪೊಲೀಸ್ ಸೂಚನೆಗಳನ್ನು ಪಾಲಿಸಬೇಕು.

ಉಲ್ಲಂಘನೆ: ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 92 ಮತ್ತು BNS 2023 ರ ಕಲಂ: 221 ಅಡಿಯಲ್ಲಿ ಕ್ರಮ.

——–
11. ಮಹಿಳೆಯರ ಸುರಕ್ಷತೆಗೆ ಶೂನ್ಯ ಸಮ್ಮತೆ ನೀತಿ:

ಕಾರ್ಯಕ್ರಮದ ಸಮಯ ಮಹಿಳೆಯರ ಚುಡಾವಣೆ, ಹಿಂಬಾಲಿಸುವುಕೆ, ಲೈಂಗಿಕ ಕಿರುಕುಳ ಮುಂತಾದ ಅಪರಾಧಗಳು ನಡೆಯದಂತೆ ನೋಡಿಕೊಳ್ಳಬೇಕು.

ಉಲ್ಲಂಘನೆ: BNS 2023 ರ ಕಲಂ: 74, 75, 77, 78 ಅಡಿಯಲ್ಲಿ ಕ್ರಮ.

————-
12. ಸ್ವಚ್ಛತೆ, ಪ್ಲೆಕ್ಸ್ ಮತ್ತು ಬ್ಯಾನರ್ ನಿಯಂತ್ರಣ:
ಯಾವುದೇ ಬ್ಯಾನರ್ ಅಥವಾ ಪ್ಲೆಕ್ಸ್ ಅನ್ನು ಸಂಬಂಧಿತ ಪ್ರಾಧಿಕಾರದಿಂದ ಮುಂಚಿತ ಅನುಮತಿ ಇಲ್ಲದೆ ಹಾಕಬಾರದು. ಕಾರ್ಯಕ್ರಮ ಮುಗಿದ ತಕ್ಷಣ ಅವುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಬೇಕು.

ಉಲ್ಲಂಘನೆ: ಕರ್ನಾಟಕ ತೆರೆದ ಸ್ಥಳ (ಅಲಂಕಾರ ತಡೆಯುವಿಕೆ) ಕಾಯ್ದೆ 1981 BNS 2023 ರ ಕಲಂ: 196, ಪರಿಸರ ಕಾಯ್ದೆ 1986 ರ ಕಲಂ: 15 ಮತ್ತು MCC ಕಸ ನಿರ್ವಹಣಾ ನಿಬಂಧನೆಗಳು ಅಡಿಯಲ್ಲಿ ಕ್ರಮ.

———————–
13. ಶಸ್ತ್ರಾಸ್ತ್ರಗಳು ಮತ್ತು ಅಪಾಯಕಾರಿಯಾದ ವಸ್ತುಗಳ ನಿಷೇಧ:

ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರಾಸ್ತ್ರ, ಹರಿತವಾದ ಆಯುಧಗಳು ಇತ್ಯಾದಿ ಅಪಾಯಕಾರಿ ಆಯುಧಗಳ ಪ್ರದರ್ಶನ ಮತ್ತು ಸಾಗಾಟ ಮಾಡಬಾರದು.

ಉಲ್ಲಂಘನೆ: Arms Act 1959 ರ ಕಲಂ: 25 ಅಡಿಯಲ್ಲಿ ಕ್ರಮ.

—————
14. ಡೋನ್ ಬಳಸಲು ಮುಂಚಿತ ಅನುಮತಿ ಕಡ್ಡಾಯ:

ಮುಂಚಿತ ಅನುಮತಿ ಇಲ್ಲದೆ ಯಾವುದೇ ಡೋನ್ ಅಥವಾ UAV ಬಳಸುವುದು ನಿಷಿದ್ಧ.

ಉಲ್ಲಂಘನೆ: ಡೋನ್ ನಿಯಮಗಳು 2021 ರ ನಿಯಮ 49 ಅಡಿಯಲ್ಲಿ ಕ್ರಮ.

————
15. ಮೆರವಣಿಗೆಯಲ್ಲಿ ಪ್ರಾಣಿಗಳ ಬಳಕೆಗೆ ನಿಯಂತ್ರಣ:

ಮೆರವಣಿಗೆ ಅಥವಾ ಪ್ರದರ್ಶನಗಳಲ್ಲಿ ಪ್ರಾಣಿಗಳನ್ನು ಬಳಸಲು ಮುಂಚಿತ ಅನುಮತಿ ಪಡೆಯಬೇಕು ಮತ್ತು ಪ್ರಾಣಿ ಹಕ್ಕುಗಳ ನಿಯಮ ಪಾಲನೆ ಕಡ್ಡಾಯ.

ಉಲ್ಲಂಘನೆ: ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ರ ಕಲಂ: 11 ಮತ್ತು 22 ಅಡಿಯಲ್ಲಿ ಕ್ರಮ.

————
16. ಪೊಲೀಸ್ ತಪಾಸಣೆಗೆ ಅಡ್ಡಿ ಮಾಡುವುದು ನಿಷೇಧ:

ಪೊಲೀಸರು ಅಥವಾ ಅಧಿಕೃತ ಅಧಿಕಾರಿಗಳು ಯಾವುದೇ ಸಮಯದಲ್ಲಿ ಸ್ಥಳವನ್ನು ತಪಾಸಣೆ ಮಾಡಬಹುದು.

ಉಲ್ಲಂಘನೆ: BNS 2023 ರ ಕಲಂ: 221 ಅಡಿಯಲ್ಲಿ ಕ್ರಮ.

————-
17. ಅನುಮಾನಾಸ್ಪದ ಚಟುವಟಿಕೆಗಳ ವರದಿ ನೀಡುವುದು ಕಡ್ಡಾಯ:

ಆಯೋಜಕರು ಮತ್ತು ಸಾರ್ವಜನಿಕರು ಯಾವುದೇ ಸಂಶಯಾಸ್ಪದ ಚಟುವಟಿಕೆ, ಸುಳ್ಳು ಮಾಹಿತಿ ಅಥವಾ ಗಲಭೆಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ಅಥವಾ 112 ಗೆ ಕರೆಮಾಡಿ ವರದಿ ಮಾಡಬೇಕು.

ಉಲ್ಲಂಘನೆ: BNS 2023 ರ ಕಲಂ 217 ಅಡಿಯಲ್ಲಿ ಕ್ರಮ.

ವಿಧಿಸಲಾದ ಯಾವುದೇ ಷರತ್ತುಗಳ ಉಲ್ಲಂಘನೆಯು ಭಾರತೀಯ ನ್ಯಾಯ ಸಂಹಿತೆ 2023, ಕರ್ನಾಟಕ ಪೊಲೀಸ್ ಕಾಯ್ದೆ 1963,
ಪರಿಸರ ಸಂರಕ್ಷಣಾ ಕಾಯ್ದೆ 1986, ಮೋಟಾರು ವಾಹನ ಕಾಯ್ದೆ 1988, ಮಾಹಿತಿ ತಂತ್ರಜ್ಞಾನ ಕಾಯ್ದೆ 2000,
ಶಸ್ತ್ರಾಸ್ತ್ರ ಕಾಯ್ದೆ 1959, ಡೋನ್ ನಿಯಮಗಳು 2021, ಸ್ಫೋಟಕಗಳ ಕಾಯ್ದೆ 1884 ಮತ್ತು ಇತರ ಸಂಬಂಧಿತ ಕಾನೂನುಗಳ
ಅಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "MANGALORE CITY POLICE: ಮಂಗಳೂರು ನಗರ ಪೊಲೀಸ್ – ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಆಚರಣೆಗಾಗಿ ಷರತ್ತುಗಳು DETAILS"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*