ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾವೃಂದ (ರಿ) ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಸಹಯೋಗದಲ್ಲಿ ಸ್ವಚ್ಛ ಪರಿಸರ ಸುಂದರ ಜೀವನ ಎಂಬ ಆಶಯದೊಂದಿಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನೆತ್ತರಕೆರೆಯಲ್ಲಿ ನಡೆಯಿತು.ತಾಲೂಕಿನ ಪುದು ಕಳ್ಳಿಗೆ ಗ್ರಾಮದ ನೆತ್ತರಕೆರೆ ಪರಿಸರದ ಶಾಲಾ ವಠಾರ,ಅಶ್ವತಕಟ್ಟೆ, ಕೆರೆ ಹಾಗೂ ರಸ್ತೆಯ ಇಕ್ಕೆಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ನವೋದಯ ಮಿತ್ರ ಕಲಾ ವೃಂದದ ಅಧ್ಯಕ್ಷ ಜಗದೀಶ ಎನ್, ನೇತ್ರಾವತಿ ಮಾತೃಮಂಡಳಿಯ ಅಧ್ಯಕ್ಷೆ ಸುಶೀಲ ಶೇಖರ್ ಸಹಿತ ಸಂಘದ ಪದಾಧಿಕಾರಿಗಳು ಸದಸ್ಯರು ಪರಿಸರದ ಜನರು ಬಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಿದರು.