ಕಾವಳಪಡೂರು: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ನಡೆಯಿತು.

ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾವಿಭಾಗದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕ ಶೇಖ್ ಆದಂ ಸಾಹೇಬ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳನ್ನು ತಿದ್ದಿದರೆ, ಪತ್ರಕರ್ತರು ಸಮಾಜವನ್ನು ತಿದ್ದುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ವಿದ್ಯಾರ್ಥಿಗಳ ಜೊತೆ ಪತ್ರಕರ್ತರು ಹೀಗೊಂದು ಮಾತುಕತೆ” ಮಾಹಿತಿ ಕಾರ್ಯಾಗಾರ ನಡೆಯಿತು. ಪತ್ರಕರ್ತರಾದ ಸಂದೀಪ್ ಸಾಲ್ಯಾನ್ ವೃತ್ತಪತ್ರಿಕೆಗಳ ಸುತ್ತಮುತ್ತ, ಹರೀಶ್ ಮಾಂಬಾಡಿ ಮಾಧ್ಯಮ ಮತ್ತು ಅವಕಾಶಗಳು, ಮೌನೇಶ ವಿಶ್ವಕರ್ಮ ಶಿಕ್ಷಣ ಮತ್ತು ರಂಗಭೂಮಿ ಕುರಿತು ವಿಚಾರ ಮಂಡಿಸಿದರು. ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.
ಪತ್ರಕರ್ತರಾದ ರತ್ನದೇವ್ ಪೂಂಜಾಲಕಟ್ಟೆ ಸ್ವಾಗತಿಸಿದರು, ವೆಂಕಟೇಶ್ ಬಂಟ್ವಾಳ ಪ್ರಸ್ತಾವನೆಗೈದರು. ಗಣೇಶ ಪ್ರಸಾದ ಪಾಂಡೇಲು ವಂದಿಸಿದರು. ಕಿರಣ್ ಸರಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಪತ್ರಕರ್ತರಾದ ಕಿಶೋರ್ ಪೆರಾಜೆ, ವಿಷ್ಣುಗುಪ್ತ ಪುಣಚ, ಅಬ್ದುಲ್ ರಹಿಮಾನ್, ಚಂದ್ರಶೇಖರ ಕಲ್ಮಲೆ ಸಹಕರಿಸಿದರು. ಇದೇ ವೇಳೆ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.


Be the first to comment on "KAVALAPADOORU: ಕಾವಳಪಡೂರು: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ"