ಕಲ್ಕಡ್ಕದ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭ ನಡೆಯಿತು.
ಪುತ್ತೂರು ವಿವೇಕಾನಂದ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ ಪಿ.ಆರ್. ನಿಡ್ಪಳ್ಳಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ಬಳಕೆಗಳು ಯಾವಾಗಲೂ ಧನಾತ್ಮಕ ರೀತಿಯಲ್ಲಿ ಇರಬೇಕು ಎಂದರು. ಅತಿಥಿಗಳಾಗಿ ಪತ್ರಿಕಾವರದಿಗಾರ ರಾಕೇಶ್ ನಾಯಕ್, ಬರೆಹಗಾರರಾದ ರಮ್ಯಾ ಬೋಳಂತೂರು, ವಿದ್ಯಾ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಮಲ್ಲಿಕಾ ಶೆಟ್ಟಿ, ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಉಪ ಪ್ರಾಂಶುಪಾಲರಾದ ದಿನೇಶ್ ಉಪಸ್ಥಿತರಿದ್ದರು. ಉಪನ್ಯಾಸಕಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರ್ವಹಿಸಿದರು.