ಬಂಟ್ವಾಳ ತಾಲ್ಲೂಕಿನ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಗೋವಿಂದ ಸ್ವಾಮಿ ಭಜನಾ ಮಂದಿರದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಗುರುವಾರ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಆಡಳಿತ ಸಮಿತಿ ಅಧ್ಯಕ್ಷ ಬಿ.ಯೋಗೀಶ ಸಪಲ್ಯ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬರಬೈಲು, ಪ್ರಮುಖರಾದ ಗಜೇಂದ್ರ ಪ್ರಭು, ಸುಲೋಚನಾ ಜಕ್ರಿಬೆಟ್ಟು, ಜಗದೀಶ ಭಂಡಾರಿ, ಹರೀಶ್ ಬಂಟ್ವಾಳ, ವಿಜಯ ಕುಮಾರ್ ಕೊಡಿಯಾಲ್ ಬೈಲು ಮತ್ತಿತರರು ಇದ್ದರು.