ಬಂಟ್ವಾಳ

Bantwal : ಬಿ.ಸಿ.ರೋಡ್ ನಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ತಾನ್ ಯುವಕ ಹೃದಯಾಘಾತಕ್ಕೆ ನಿಧನ

ರಾಜಸ್ಥಾನ ಮೂಲದ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ಬುಧವಾರ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟವರು. ಇವರು ಬಿ.ಸಿ.ರೋಡಿನ ಹೃದಯಭಾಗದಲ್ಲಿ  ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ನವರತನ್ ಇಲೆಕ್ಟ್ರಿಕಲ್ ಅಂಗಡಿಯಲ್ಲಿ ಮ್ಯಾನೇಜರ್ ಆಗಿದ್ದರು. ಸೌಮ್ಯ ಸ್ವಭಾವದವನಾಗಿದ್ದ ಇವರು ಕಳೆದ ಆರು ತಿಂಗಳ ಹಿಂದೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಜುಲೈ 9ರಂದು ರಾತ್ರಿ ಸುಮಾರು 7 ಗಂಟೆಗೆ ತಲೆಸುತ್ತು ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದೊಕೊಂಡು ಹೋಗಿದ್ದಾರೆ. ಆದರೆ ಆಸ್ಪತ್ರೆ ಮೆಟ್ಟಿಲು ಹತ್ತುವ  ಹೊತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
Team bantwal news