ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

MLA Rajesh Naik inspected the new building of the Brahmashri Narayanaguru Residential School and Community Health Center being constructed in Punjalakate.
ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ 18 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ ಕಟ್ಟಡವನ್ನು ಪರಿಶೀಲಿಸಿ ಮಾಧ್ಯಮದವರ ಜೊತೆ ಮಾತನಾಡಿದರು.
ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ವಸತಿ ಕೊರತೆಯಿರುವ ಹಿನ್ನೆಲೆಯಲ್ಲಿ ಸ್ಥಳಾಂತರ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನಿರ್ದೇಶನ ನೀಡಿದರು.

ಇದೇ ಸಂದರ್ಭ ಮೇಲ್ದರ್ಜೆಗೇರಿರುವ ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು 12 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುವ ಕಟ್ಟಡವನ್ನು ಪರಿಶೀಲಿಸಿ , ಕಾಮಗಾರಿಗಳ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇಂಜಿನಿಯರ್ ಅವರಿಂದ ಮಾಹಿತಿ ಪಡೆದುಕೊಂಡರು.

PUNJALAKATTE: ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆ ಕಟ್ಟಡ
ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾಗಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕೆಂಬುದು ಈ ಭಾಗದ ಹಿರಿಯ ಮುಖಂಡ ತುಂಗಪ್ಪ ಬಂಗೇರ ಹಾಗೂ ಇತರ ಸಾರ್ವಜನಿಕರ ಒತ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಅಂದಿನ ರಾಜ್ಯ ಆರೋಗ್ಯ ಸಚಿವರು, ಬಂಟ್ವಾಳ ಕ್ಕೆ ಬೇಟಿ ನೀಡಿದ ವೇಳೆ ಆರೋಗ್ಯ ಕೇಂದ್ರ ವನ್ನು ಮೇಲ್ದರ್ಜೆಗೆ ಏರಿಸಿ, ಅದೇಶಿಸುವ ಜೊತೆಗೆ , ಬಳಿಕ ಅನುದಾನವನ್ನು ನೀಡಿದ್ದರು ಎಂದು ಈ ಸಂದರ್ಭ ಶಾಸಕ ನಾಯ್ಕ್, ಸುದ್ದಿಗಾರರಿಗೆ ತಿಳಿಸಿದರು.

ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರ

ಪ್ರಮುಖರಾದ ಜಿಪಂ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ,ಪಿಲಾತಬೆಟ್ಟುಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಕಾರಿಂಜ, ಪಿಲಾತಬೆಟ್ಟು ಗ್ರಾ.ಪಂ.ಸದಸ್ಯರಾದ ಹರ್ಷಿಣಿ ಪುಷ್ಪಾನಂದ, ಕಾಂತಪ್ಪ ಕರ್ಕೇರ, ರಾಯಿ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಬಂಟ್ವಾಳ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಬಿಜೆಪಿ ಮಾಧ್ಯಮ ಸಂಚಾಲಕ ಪುರುಷೋತ್ತಮ ಶೆಟ್ಟಿ ವಾಮದಪದವು, ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕಮಂಗಿಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್, ಪ್ರಾಂಶುಪಾಲ ಸಂತೋಷ್ ಸನಿಲ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಿತೇಶ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು


Be the first to comment on "PUNJALAKATTE: ಪುಂಜಾಲಕಟ್ಟೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆ, ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಶಾಸಕ ರಾಜೇಶ್ ನಾಯ್ಕ್ ಅವರಿಂದ ಪರಿಶೀಲನೆ"