ಕೆಂಪುಕಲ್ಲು, ಮರಳು ಸಮಸ್ಯೆ: ಜುಲೈ 14 ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂ ಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದತೀ ವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು ಕಾಮಗಾರಿ ಪೂರ್ತಿ ಯಾಗದೆ ಬಡವರು, ಕೂಲಿ ಕಾರ್ಮಿಕರ ಜೀವನದ ಪರಿಸ್ಥಿತಿ ಹದ ಗೆಟ್ಟಿರುವ ಕಾರಣ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದವ ತಿಯಿಂದ ಸರಕಾರದ ವಿರುದ್ದ ಜುಲೈ 14 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಬಿಸಿರೋಡ್ ನಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಗುವುದು ಎಂದೂ ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಹಾಗೂ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮತ್ತು ವಿವಿಧ ಕಟ್ಟಡದ ಕೆಲಸ ಕಾರ್ಮಿಕರು, ಮೇಸ್ತ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.


Be the first to comment on "Bantwal: ಕೆಂಪುಕಲ್ಲು, ಮರಳು ಸಮಸ್ಯೆ: ಜುಲೈ 14ರಂದು ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಬಿಜೆಪಿ ಪ್ರತಿಭಟನೆ"