ಪ್ರಮುಖ ಸುದ್ದಿಗಳು

Bantwal : ಅರಣ್ಯ ಗಸ್ತುಪಾಲಕ ಜಿತೇಶ್.ಪಿ. ಅವರಿಗೆ ಮುಖ್ಯಮಂತ್ರಿ ಪದಕ

 ಮಂಗಳೂರು:  ಬಂಟ್ವಾಳ ವಲಯದ ಅರಣ್ಯ  ಇಲಾಖೆಯ ಗಸ್ತುಪಾಲಕ ಜಿತೇಶ್.ಪಿ  ಅವರಿಗೆ  ಮುಖ್ಯಮಂತ್ರಿ ಪದಕ  ಲಭಿಸಿದೆ. ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ ವಲಯದಲ್ಲಿ ಗಸ್ತು ಪಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರು ವಿಭಾಗದ ಗಸ್ತು ಪಾಲಕ ಹಾಗೂ ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರ ಅರಣ್ಯ ಇಲಾಖೆಯಲ್ಲಿನ ದಕ್ಷ ,ಹಾಗೂ ಪ್ರಾಮಾಣಿಕತೆಯ ಕೆಲಸವನ್ನು ಪರಿಗಣಿಸಿ ಅಕ್ರಮವಾಗಿ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವ ಸಾಧನೆಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

Bantwal zone forest department patrol officer Jitesh P has been awarded the Chief Minister’s Medal.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.