ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಬಳಿಯ ಮುರತ್ತಮೇಲ್ ಎಂಬಲ್ಲಿ ಗುರುವಾರ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಮುರತ್ತಮೇಲ್ ನಿವಾಸಿ ಬಾಲಕೃಷ್ಣ (60) ಮೃತಪಟ್ಟವರು. ಸೌತಡ್ಕ ದೇವಸ್ಥಾನದಿಂದ ಒಂದು ಕಿ.ಮೀ.ನಷ್ಟು ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗುರುವಾರ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆನೆಗಳು ಎರಗಿವೆ ಗುರುವಾರ ಸುಮಾರು ಬೆಳಿಗ್ಗೆ 11 ರಿಂದ 12 ಗಂಟೆಯ ಅವಧಿಯಲ್ಲಿ ಘಟನೆ ಸಂಭವಿಸಿದೆ. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿರುತ್ತಾರೆ.