
ರೈತರ ಸಾಲ ಮನ್ನಾ ಹಣವನ್ನು ಅತೀ ಶೀಘ್ರವಾಗಿ ಬಿಡುಗಡೆ ಮಾಡುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ದ ಅಧ್ಯಕ್ಷ ಪ್ರಭಾಕರ ಪ್ರಭು ಸಹಕಾರ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಅವರು ಕರ್ನಾಟಕ ಸರಕಾರದ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಸಹಕಾರ ಸಂಘಗಳ ನಿಬಂಧಕರಿಗೂ ಮನವಿ ಸಲ್ಲಿಸಿದ್ದಾರೆ.

OPTIC WORLD
ಕರ್ನಾಟಕ ಸರಕಾರವು 2018-19 ನೇ ಸಾಲಿನಲ್ಲಿ ರೈತರು ಪಡೆದಿರುವ ಬೆಳೆ ಸಾಲಗಳ ಪೈಕಿ ಒಂದು ಲಕ್ಷವನ್ನು ಮನ್ನಾ ಮಾಡಿ ಆದೇಶ ಹೊರಡಿಸಲಾಗಿತ್ತು .ಈ ಆದೇಶದಲ್ಲಿನ ನಿಯಾಮವಳಿಯಂತೆ ಸಹಕಾರ ಸಂಘಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ಪಡೆದಿರುವ ರೈತರ ಅರ್ಜಿಗಳನ್ನು ಪರಿಶೀಲಿಸಿ ಸಾಲ ಮನ್ನಾ ಯೋಜನೆಗೆ ಅರ್ಹರಾದ ಪೈಕಿ ಬಹುತೇಕ ರೈತರಿಗೆ ಸಾಲಮನ್ನಾ ಹಣವನ್ನು ಸರಕಾರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿರುತ್ತದೆ . ಈ ರೀತಿಯಲ್ಲಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಮನ್ನಾ ಯೋಜನೆಗೆ ಅರ್ಹವಾದ ಹಲವಾರು ರೈತರಿಗೆ ಸಾಲ ಮನ್ನಾ ಹಣ ಬಿಡುಗಡೆಯಾಗಿರುವುದಿಲ್ಲ . ಈ ಬಗ್ಗೆ ಸಾಲ ಮನ್ನಾ ಹಣ ಬಿಡುಗಡೆಯಾಗದೇ ಇರುವ ರೈತ ಸದಸ್ಯರೆಲ್ಲ ದಿನಂಪ್ರತಿ ಬಂದು ಪ್ರಾಥಮಿಕ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದು ಕೊಳ್ಳುತ್ತಿರುವ ಪ್ರಸಂಗಗಳು ಹಲವು ಕಡೆ ನಡೆಯುತ್ತಿರುತ್ತದೆ .ಸಾಲಮನ್ನಾ ಬಗೆಗಿನ ಹಣವನ್ನು ಸರಕಾರ ಬಿಡುಗಡೆ ಮಾಡದೇ ಸರಕಾರದ ಸಹಕಾರ ಇಲಾಖೆ ಮಾಡಿರುವ ಎಡವಟ್ಟಿಗೆ ಕೆಳಹಂತದಲ್ಲಿರುವ ಪ್ರಾಥಮಿಕ ಸಹಕಾರ ಸಂಘಗಳು ತನ್ನ ಸದಸ್ಯರಿಗೆ ಉತ್ತರಿಸಲಾಗದ ಪರಿಸ್ಥಿತಿ ಉದ್ಭವಿಸಿರುತ್ತದೆ ಎಂದವರು ಮನವಿಯಲ್ಲಿ ವಿವರಿಸಿದ್ದಾರೆ .


Basavaraj Shivaputrappa Anikivi talluk bailhongale branch kvgb bank budarkatti Rs.2.50.000 bele sala date 22/04/2022 Sala maruphavati madilla kelau adachenegagi ega bele heni agide sala manna madabekendu vinantisuttene