ಬಂಟ್ವಾಳ ತಾಲೂಕು ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜು.೨೪ರಂದು ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ ,ವಿಶೇಷ ಉತ್ಸವ ಜರಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ವೀರೇಂದ್ರ ಅಮೀನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
OPTIC WORLD
ಬೃಹತ್‌ಬಂಡೆಗಳಿಂದ ಆವೃತವಾದ ಗಿರಿಧಾಮದಲ್ಲಿರುವ ಆಕರ್ಷಣೀಯ,ಅತ್ಯಂತ ಪ್ರಾಚೀನ,ರಮ್ಯ ಈ ದೇವಸ್ಥಾನದ ದಕ್ಷಿಣ ಭಾಗದ ತಳದಲ್ಲಿರುವ ಗದಾತೀರ್ಥವೆಂಬ ಸರೋವರದಲ್ಲಿ ಅನಾದಿ ಕಾಲದಿಂದಲೂ ಆರೋಗ್ಯ ಸಮೃದ್ಧಿಯ ಸಂದೇಶ ಸಾರುವ ಆಟಿ ಅಮಾವಾಸ್ಯೆಯಂದು ಭಕ್ತಾಽಗಳು ಹಾಗೂ ವಿಶೇಷವಾಗಿ ನವದಂಪತಿಗಳು ಇಲ್ಲಿ ಪುಣ್ಯ ಸ್ನಾನಮಾಡಿ ಪಾರ್ವತಿ ಪರಮೇಶ್ವರರಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥ ಈಡೇರಿಸಿಕೊಳ್ಳುವ ಸಂಪ್ರದಾಯವಿದೆ.