
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಂಗನವಾಡಿ ಕೇಂದ್ರ, ಶಾಲೆ, ಹೈಸ್ಕೂಲು ಹಾಗೂ ಪಿಯುಸಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಸರಕಾರಿ, ಅನುದಾನಿತ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 25ರಂದು ರಜೆ.
ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆ ಇದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.


Be the first to comment on "Dakshina kannada News: ರೆಡ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ-ಪಿಯುಸಿವರೆಗೆ ಜು.25ರಂದು ರಜೆ"