ಮುಡಿಪು ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ಸಹಯೋಗದಲ್ಲಿ ವಿಶ್ವ ಭಾರತಿ ಯಕ್ಷ ಸಂಭ್ರಮದ ಸಲುವಾಗಿ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜುಲೈ 27ರವರೆಗೆ ಪ್ರತಿದಿನ ಸಂಜೆ ತಾಳಮದ್ದಳೆ ನಡೆಯಲಿದೆ.
ಯಕ್ಷದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತುಳುಶಿವಳ್ಳಿ ಸಂಘದ ಅಧ್ಯಕ್ಷ ರಾಜಾರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು.
ಸಜೀಪಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಬಾಯಾರುಪದವು ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾ ಸಂಘದ ಸಂಚಾಲಕ ವಸಂತ ಮಾಸ್ಟರ್ ಬಾಯಾರು, ನ್ಯಾಯವಾದಿ ಗಿರೀಶ ಮುಳಿಯಾಲ, ನಿವೃತ್ತ ತಹಸೀಲ್ದಾರ್ ಮೋಹನ ರಾವ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಂಚಾಲಕ ಪ್ರಶಾಂತ್ ಹೊಳ್ಳ ಸ್ವಾಗತಿಸಿದರು. ಜಗದೀಶ ಹೊಳ್ಳ ಕಾರ್ಯಕ್ರಮ ನಿರ್ವಹಿಸಿದರು.