ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಬಂಟ್ವಾಳ ಮೂಡ ವಲಯ ಕಾಂಗ್ರೆಸ್ ಆಶ್ರಯದಲ್ಲಿ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಗುರುವಾರ ಜುಲೈ 31ರಂದು ಬೆಳಗ್ಗೆ 10.30ಕ್ಕೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ಸನ್ನಿಧಿ ಮುಂಭಾಗ ನಡೆಯಲಿದೆ. ಕರ್ನಾಟಕ ಪ್ರದೇಶ ಕಾಂಗ್ರಸ್ ವಕ್ತಾರರಾದ ಸುಧೀರ್ ಕುಮಾರ್ ಮುರೊಳ್ಳಿ ಮತ್ತು ಎಂ.ಜಿ.ಹೆಗಡೆ ಅವರು ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
OPTIC WORLD