OPTIC WORLD
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕರಾದ ವಸಂತ ಪೂಜಾರಿ ಉಪಸ್ಥಿತರಿದ್ದರು