OPTIC WORLD
ಬಂಟ್ವಾಳ ತಾಲೂಕಿನ ಪಂಚಗ್ಯಾರಂಟಿ ಅನುಷ್ಠಾನ ಸಮಿತಿ, ಬಂಟ್ವಾಳ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಬಂಟ್ವಾಳ ಅಂಬೇಡ್ಕರ್ ಭವನದಲ್ಲಿ ಆಟಿದ ಗಮ್ಮತ್ತ್ ಎಂಬ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಿತು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಹಿಂದಿನ ಬದುಕು,ಆಹಾರ ಪದ್ಧತಿ, ಜೀವನಶೈಲಿಯನ್ನು ಆಟಿ ತಿಂಗಳ ಆಚರಣೆಗೆ ಸಂಬಂಧಿಸಿದ ಆಟಿದ ಕೂಟಗಳು ನೆನಪಿಸುತ್ತವೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಕಾರ್ಯಕ್ರಮದ ಉದ್ದೇಶಗಳ ಕುರಿತು ವಿವರಿಸಿದರು.
ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಿಕ್ಷಕ ವಿಠಲ ನಾಯಕ್ ಕಲ್ಲಡ್ಕ ಮಾತನಾಡಿ, ಇಂದು ಮಾನವೀಯತೆಯನ್ನು ರೂಢಿಸಿಕೊಳ್ಳುವುದರೊಂದಿಗೆ ನಮ್ಮ ಪೂರ್ವಜರ ಆಚರಣೆಯ ಮಹತ್ವವನ್ನು ಅರಿಯಬೇಕಾಗಿದೆ ಎಂದರು. ವೇದಿಕೆಯಲ್ಲಿ ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು. ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿಜಯಶಂಕರ ಆಳ್ವ ಯಕ್ಷಗಾನ ಶೈಲಿಯಲ್ಲಿ ಪ್ರಾರ್ಥಿಸಿದರು. ಸಹಾಯಕ ನಿರ್ದೇಶಕ ವಿಶ್ವನಾಥ್ ವಂದಿಸಿದರು. ಪಿಡಿಓ ಸುನಿಲ್ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಸಿಬ್ಬಂದಿಯೇ ತಯಾರಿಸಿದ ಆಟಿಯ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನವಿತ್ತು.