OPTIC WORLD
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನದೀಪ ಹಾಗೂ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಬಂಟ್ವಾಳ ಯೋಜನಾ ಕಚೇರಿ ಉನ್ನತಿ ಸೌಧದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಕಕ್ಯ ವಹಿಸಿದ್ದರು. ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಮಾತನಾಡಿ ಸರಕಾರ ಮಾಡದ ಕೆಲಸವನ್ನು ವೀರೇಂದ್ರ ಹೆಗಡೆಯವರು ಮಾಡುತ್ತಿದ್ದು ಈ ಮೂಲಕ ಸುಭಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯವಾಗುತ್ತಿದೆ ಎಂದರು.
ಜ್ಞಾನದೀಪ ಹಾಗೂ ಸುಜ್ಞಾನನಿಧಿ ಶಿಷ್ಯವೇತನ ಮಂಜುರಾತಿ ಪತ್ರವನ್ನು ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಕೇಂದ್ರದ ನಿರ್ದೇಶಕರಾದ ಮಹಾಬಲ ಕುಲಾಲ್ ವಿತರಿಸಿದರು.
ಬಂಟ್ವಾಳ ಜನಜಾಗೃತಿ ವೇದಿಕೆ ಸದಸ್ಯರಾದ ಸದಾನಂದ ನಾವುರ, ಅಕ್ಷರ ದಾಸೋಹ ಬಂಟ್ವಾಳದ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಸಂಘಟನಾ ಕಾರ್ಯದರ್ಶಿ ಹರೀಶ್ ಕುದನೆ, ಕಾಡಬೆಟ್ಟು ಶೌರ್ಯ ಘಟಕದ ಪ್ರತಿನಿಧಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ತಾಲೂಕು ಯೋಜನಾಧಿಕಾರಿ ಜಯನಂದ ಪಿ ಕಾರ್ಯಕ್ರಮ ನಿರೂಪಿಸಿದರು