OPTIC WORLD
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ, ಬಿಲ್ಲವ ಮಹಿಳಾ ಸಮಿತಿಯ ವತಿಯಿಂದ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನಗೊಂಡಿತು.
ಪುರೋಹಿತ ಲೋಕೇಶ್ ಶಾಂತಿ ನೇತ್ರತ್ವದಲ್ಲಿ ವೈದಿಕ ವಿಧಿ ವಿಧಾನಗಳು ನಡೆದವು. ಈ ಸಂದರ್ಭ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಸುನೀಲ್ ಕುಂದರ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್, ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಸಂಜೀವ ಪೂಜಾರಿ ಗುರುಕೃಪಾ, ರಾಮಪ್ಪ ಪೂಜಾರಿ, ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ರಾಗಿಣಿ ಮಾಧವ ಚಂಡ್ತಿಮಾರ್, ಕಾರ್ಯದರ್ಶಿ ಮಲ್ಲಿಕಾ ಸುರೇಶ್ ಪಚ್ಚಿನಡ್ಕ, ಕೋಶಾಧಿಕಾರಿ ಪ್ರಭಾವತಿ ಹರೀಶ್ ತುಂಬೆ, ಉಪಾಧ್ಯಕ್ಷೆ ಭವಾನಿ ಕೆ ಮಾರ್ನಬೈಲ್, ಜತೆ ಕಾರ್ಯದರ್ಶಿ ನಳಿನಿ ಜನಾರ್ದನ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು , ಬಿಲ್ಲವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.