

OPTIC WORLD
ಬಂಟ್ವಾಳ ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನದ ಬಳಿಕ ಲೋಕಾಯುಕ್ತ ದಾಳಿ ನಡೆದಿದ್ದು, ಉಪತಹಸೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ.
ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಪ್ರಥಮ ದರ್ಜೆ ಸಹಾಯಕ ಸಂತೋಷ್ ಹಾಗೂ ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಧ್ಯವರ್ತಿಯ ಮೂಲಕ ಹಣ ವ್ಯವಹಾರ ನಡೆಯುವ ಸಂದರ್ಭ ಆರೋಪಿಗಳನ್ನು ವಶಕ್ಕೆ ಪಡೆದು ಸುದೀರ್ಘ ಕಾಲ ವಿಚಾರಣೆ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರ್ ಚಂದ್ರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನಾ ಪಿ. ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಬಿ, ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.


Be the first to comment on "Bantwal: ಬಂಟ್ವಾಳ ಉಪತಹಸೀಲ್ದಾರ್ ಸೇರಿ ಮೂವರು ಲೋಕಾಯುಕ್ತ ಬಲೆಗೆ"