RAGHAVENDRA RAO
IQBAL BCROAD
ಬಂಟ್ವಾಳ ತಾಲೂಕು ಟೂರಿಸ್ಟ್ ಕಾರು ಚಾಲಕ ಮತ್ತು ಮ್ಹಾಲಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ರಾವ್ ಪುನರಾಯ್ಕೆಯಾಗಿದ್ದಾರೆ.
ವಾರ್ಷಿಕ ಮಹಾಸಭೆ ಮಂಗಳವಾರ ಬಿ.ಸಿ.ರೋಡಿನಲ್ಲಿ ನಡೆದಿದ್ದು, 2025-26ನೇ ಸಾಲಿನ ಅವಧಿಗೆ 14 ಜನರ ನೂತನ ಸಮಿತಿಯನ್ನು ರಚಿಸಲಾಯಿತು. ಸಂಘದ ಗೌರವಾಧ್ಯಕ್ಷರಾಗಿದ್ದ ಪ್ರಭಾಕರ ದೈವಗುಡ್ಡೆ ಹಾಗೂ ಸದಸ್ಯರಾದ ಭೋಜ ಕುಲಾಲ್ ಅವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
OPTIC WORLD
ಅಧ್ಯಕ್ಷರಾಗಿ ಮೂರನೇ ಅವಧಿಗೆ ರಾಘವೇಂದ್ರ ರಾವ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಇಕ್ಬಾಲ್ ಬಿ.ಸಿ.ರೋಡ್ ಕೆಟಿಡಿಒ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಉಪಾಧ್ಯಕ್ಷರಾಗಿ ಪ್ರಕಾಶ್ ಕುಲಾಲ್, ಕಾರ್ಯದರ್ಶಿಯಾಗಿ ಹರಿಕಿರಣ್ ರಾಯಿ, ಕೋಶಾಧಿಕಾರಿಯಾಗಿ ಪುರುಷೋತ್ತಮ ಪೂಜಾರಿ ಅವರನ್ನು ಆರಿಸಲಾಯಿತು. ವಿನ್ಸೆಂಟ್ ರೋಡ್ರಿಗಸ್ ಕಮಲ್ ಕಟ್ಟೆ ಸ್ವಾಗತಿಸಿ, ವರದಿ ವಾಚಿಸಿದರು. ಸುರೇಶ್ ಬಂಗೇರ ಸಂಚಯಗಿರಿ ವಂದಿಸಿದರು.