Bantwal Independence Day: ಬಂಟ್ವಾಳದಲ್ಲಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಪ್ರಗತಿಯಿಂದ ಗಮನ ಸೆಳೆದ ಭಾರತ – ವಿದ್ಯಾರ್ಥಿನಿ ಭೂಮಿಕಾ

79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬಿ.ಸಿ ರೋಡ್ ನ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಕಾರ್ಯಕ್ರಮಗಳು ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯಿತು.

ಜಾಹೀರಾತು

ತಾಲೂಕು ಆಡಳಿತ ಸೌಧದ ಮುಂಭಾಗ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಉಪಸ್ಥಿತಿಯಲ್ಲಿ  ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್, ಗೃಹರಕ್ಷಕ, ಸ್ಕೌಟ್ಸ್, ಗೈಡ್ಸ್ ನಿಂದ ಪಥಸಂಚಲ ನಡೆದು ಧ್ವಜಕ್ಕೆ ವಂದನೆ ಸಲ್ಲಿಸಲಾಯಿತು.

ಬಳಿಕ ಸಭಾ ಕಾರ್ಯಕ್ರಮ ಅಂಬೇಡ್ಕರ್ ಭವನದಲ್ಲಿ ನಡೆಯಿತು. ದಿನಾಚರಣೆ ಅಂಗವಾಗಿ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬಂಟ್ವಾಳ ಎಸ್.ವಿ.ಎಸ್. ವಿದ್ಯಾಗಿರಿ ಹೈಸ್ಕೂಲ್ ವಿದ್ಯಾರ್ಥಿನಿ ಭೂಮಿಕಾ ಎಸ್. ಶೆಟ್ಟಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿ, ಇಂದು ಶಿಕ್ಷಣ, ಆರೋಗ್ಯ, ಬಾಹ್ಯಾಕಾಶ, ಮಾಹಿತಿ ತಂತ್ರಜ್ಞಾನ, ವೈಜ್ಞಾನಿಕ ಸಂಶೋಧನೆಗಳಿಂದ ಭಾರತ ಗಮನ ಸೆಳೆದಿದೆ ಎಂದರು.

BHOOMIKA SHETTY

ಬುಡಾ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಎಂಬುದು ಹಬ್ಬದಂತೆ. ಇದನ್ನು ವಿಜೃಂಭಣೆಯಿಂದ ಆಚರಿಸುವುದು ನಮ್ಮ ಕರ್ತವ್ಯ ಎಂದರು. ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳು ಸ್ವೇಚ್ಛಾಚಾರ, ದುಶ್ಚಟಗಳಿಗೆ ದಾಸರಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು. ತಹಸೀಲ್ದಾರ್ ಡಿ.ಅರ್ಚನಾ ಭಟ್ ಸಂದೇಶ ನೀಡಿ, ತ್ಯಾಗ, ಬಲಿದಾನಗಳಿಂದ ದೊರಕಿದ ಸ್ವಾತಂತ್ರ್ಯವನ್ನು ಸಂರಕ್ಷಿಸುವ ಕೆಲಸವಾಗಬೇಕು ಎಂದರು.

B. VASU POOJARY

ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಮಾತನಾಡಿ ಜನಸಾಮಾನ್ಯರಿಗೆ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುತುವರ್ಜಿಯಿಂದ ಕೆಲಸ ಮಾಡಿದಾಗ ಸ್ವಾತಂತ್ರ್ಯ ದೊರಕಿದ್ದು ಸಾರ್ಥಕ ಎನಿಸುತ್ತದೆ ಎಂದರು.

BABY KUNDER

PRIZE DISTRIBUTION

ಈ ಸಂದರ್ಭ ನಾನಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಎಪಿಎಂಸಿ ಅಧಿಕಾರಿ ಶಶಾಂಕ್, ನಗರ ಪೊಲೀಸ್ ಠಾಣೆ ಎಸ್.ಐ. ಸಂದೀಪ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿನಯ ಕುಮಾರಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಉಪಸ್ಥಿತರಿದ್ದರು. ತಾಪಂ ಇಒ ಸಚಿನ್ ಕುಮಾರ್ ವಂದಿಸಿದರು. ಶಿಕ್ಷಕರಾದ ಸುರೇಖಾ ಯಳವರ ಮತ್ತು ಗೋಪಾಲಕೃಷ್ಣ ನೇರಳಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

PAGE 1

PAGE 2

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwal Independence Day: ಬಂಟ್ವಾಳದಲ್ಲಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಪ್ರಗತಿಯಿಂದ ಗಮನ ಸೆಳೆದ ಭಾರತ – ವಿದ್ಯಾರ್ಥಿನಿ ಭೂಮಿಕಾ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*