ಸಾಂದರ್ಭಿಕ ಚಿತ್ರ
ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಷ್ಟೇ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲೂ ಭಾರಿ ಮಳೆಯ ಹಿನ್ನೆಲೆಯಲ್ಲಿ ಸೋಮವಾರ ಶಾಲೆಗಳಿಂದ (ಪಿಯುಸಿವರೆಗೆ ಕೆಲವೆಡೆ) ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಶಾಲೆ, ಹೈಸ್ಕೂಲುಗಳಿಗೆ ರಜೆ ಘೋಷಿಸಲಾಗಿದ್ದರೆ, ಉಡುಪಿಯಲ್ಲಿ ಪಿಯುಸಿವರೆಗೆ ರಜೆ ಘೋಷಿಸಲಾಗಿದೆ. ಇನ್ನು ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ನದಿ, ಸಮುದ್ರಕ್ಕೆ ಇಳಿಯದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
OPTIC WORLD
ಮಳೆಯ ಕಾರಣ ರಸ್ತೆ ಸಂಚಾರದಲ್ಲೂ ಅಲ್ಲಲ್ಲಿ ವ್ಯತ್ಯಯವಾಗುತ್ತಿದ್ದು, ಶಿರಾಡಿ ಘಾಟ್ ನಲ್ಲಿ ಆಗಾಗ್ಗೆ ಗುಡ್ಡ ಕುಸಿತದ ವರ್ತಮಾನಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಜಾಗರೂಕರಾಗಿರಲು ಸೂಚಿಸಲಾಗಿದೆ. ಅನಿವಾರ್ಯ ಕಾರಣವಿದ್ದರಷ್ಟೇ ಸ್ವಂತ ವಾಹನಗಳಲ್ಲಿ ಸಂಚರಿಸುವುದು ಸೂಕ್ತ.